ಕೊಡಗು ಜಿಲ್ಲೆಯಲ್ಲಿ ಶನಿವಾರ 46 ಹೊಸ ಕೋವಿಡ್-19 ಪ್ರಕರಣ

ಮಡಿಕೇರಿ ಜು.17(ಕರ್ನಾಟಕ ವಾರ್ತೆ):-ಜಿಲ್ಲೆಯಲ್ಲಿ ಶನಿವಾರ 46 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ. 31 ಆರ್‍ಟಿಪಿಸಿಆರ್ ಮತ್ತು 15 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ 19 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 14 ಪ್ರಕರಣಗಳು ಆರ್‍ಟಿಪಿಸಿಆರ್ ಮತ್ತು 05 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ 17 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 10 ಆರ್‍ಟಿಪಿಸಿಆರ್ ಮತ್ತು 07 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ವಿರಾಜಪೇಟೆ ತಾಲೂಕಿನಲ್ಲಿ 10 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 07 ಆರ್‍ಟಿಪಿಸಿಆರ್ ಮತ್ತು 03 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 30,899 ಆಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 62 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು 30,093 ಮಂದಿ ಗುಣಮುಖರಾಗಿದ್ದಾರೆ. 422 ಸಕ್ರಿಯ ಪ್ರಕರಣಗಳಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ಸಾವು ಉಂಟಾಗಿಲ್ಲ. ಒಟ್ಟು 384 ಮರಣ ಪ್ರಕರಣಗಳು ವರದಿಯಾಗಿದೆ. ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 100 ಆಗಿದೆ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ.2.03 ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ.

Latest Indian news

Popular Stories