ಸಂಪಾಜೆಯಲ್ಲಿ ಆಹಾರದ ಕಿಟ್ ಮತ್ತು ಆಕ್ಸಿಜನ್ ಕನ್ಸೆಂಟ್ರೇಟರ್ ವಿತರಣೆ

ಮಡಿಕೇರಿ ಜೂ.೮ : ಕೆಪಿಸಿಸಿ ವಕ್ತಾರರು ಹಾಗೂ ಹಿರಿಯ ವಕೀಲರಾದ ಎ.ಎಸ್.ಪೊನ್ನಣ್ಣ ಅವರು ನೀಡಿರುವ ಆಹಾರದ ಕಿಟ್ ಮತ್ತು ಆಕ್ಸಿಜನ್ ಕನ್ಸೆಂಟ್ರೇಟರ್ ನ್ನು ಕಾಂಗ್ರೆಸ್ ಪ್ರಮುಖರು ಸಂಪಾಜೆಯಲ್ಲಿ ವಿತರಿಸಿದರು.
ಪೊನ್ನಣ್ಣ ಅವರ ಪರವಾಗಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಸಾಮಾಜಿಕ ಜಾಲತಾಣದ ಅಧ್ಯಕ್ಷ ಸೂರಜ್ ಹೊಸೂರು ಹಾಗೂ ಯುವ ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ ಹನೀಫ್ ಸಂಪಾಜೆ ಅವರುಗಳು ಸಂಪಾಜೆ ಚೆಕ್ ಪೋಸ್ಟ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಆಹಾರದ ಕಿಟ್ ಗಳನ್ನು ವಿತರಿಸಿದರು.
ನಂತರ ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆಕ್ಸಿಜನ್ ಕನ್ಸೆಂಟ್ರೇಟರ್ ನ್ನು ವೈದ್ಯಾಧಿಕಾರಿ, ಆರೋಗ್ಯಾಧಿಕಾರಿ ಹಾಗೂ ಸಿಬ್ಬಂದಿಗಳ ಸಮ್ಮುಖದಲ್ಲಿ ಹಸ್ತಾಂತರಿಸಲಾಯಿತು.
ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಜಿಲ್ಲೆಯ ಜನತೆಗೆ ನೆರವಾಗುತ್ತಿರುವ ಎ.ಎಸ್.ಪೊನ್ನಣ್ಣ ಅವರ ಕಾಳಜಿ ಬಗ್ಗೆ ಮಾತನಾಡಿದ ಸೂರಜ್ ಹೊಸೂರು ಮುಂದಿನ ದಿನಗಳಲ್ಲಿಯೂ ಅಗತ್ಯ ಸಹಕಾರ ದೊರೆಯಲಿದೆ ಎಂದು ಭರವಸೆ ನೀಡಿದರು.
ಆರಕ್ಷಕ ಸಿಬ್ಬಂದಿಗಳು ಹಾಗೂ ವೈದ್ಯಕೀಯ ಸಿಬ್ಬಂದಿಗಳು ಹಾಜರಿದ್ದರು. ಫೋಟೋ : ಸಂಪಾಜೆ

Latest Indian news

Popular Stories

error: Content is protected !!