ಜಿಲ್ಲಾ ಆರೋಗ್ಯಾಧಿಕಾರಿಗಳ ಕಚೇರಿಯಿಂದ ಲ್ಯಾಪ್‌ಟಾಪ್ ಕಳವು : ಆರೋಪಿ ಬಂಧನ

ಮಡಿಕೇರಿ ಜೂ.೨ : ನಗರದ ಜಿಲ್ಲಾ ಆರೋಗ್ಯಾಧಿಕಾರಿಗಳ ಕಚೇರಿ ಸಂಕೀರ್ಣದಿAದ ಸರಕಾರಿ ಲ್ಯಾಪ್‌ಟಾಪ್ ಕಳವು ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಮಡಿಕೇರಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ.
ನಗರದ ಚೈನ್ ಗೇಟ್ ನಿವಾಸಿ ಸುಮಂತ್(೧೯) ಎಂಬಾತನೇ ಬಂಧಿತ ಆರೋಪಿಯಾಗಿದ್ದು, ಆತನ ಬಳಿಯಿದ್ದ ೪೦ ಸಾವಿರ ರೂ. ಮೌಲ್ಯದ ಲ್ಯಾಪ್‌ಟಾಪ್ ಅನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿ ಸುಮಂತ್ ನಗರದ ಅಂಗಡಿಯೊAದರ ಕಳವು ಪ್ರಕರಣದಲ್ಲಿ ಸೆರೆಯಾಗಿ ಜೈಲು ಸೇರಿದ್ದು, ಕಳೆದ ೨ ದಿನಗಳ ಹಿಂದೆ ಜಾಮೀನಿನ ಮೇಲೆ ಹೊರ ಬಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ ಆರೋಪಿಯ ವಿರುದ್ದ ಮಡಿಕೇರಿ, ಕುಶಾಲನಗರ ಪೊಲೀಸ್ ಠಾಣೆಗಳಲ್ಲಿ ವಿವಿಧ ಕಳವು ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮಂಗಳವಾರ ಸಂಜೆ ೪ ಗಂಟೆಯ ಸಮಯದಲ್ಲಿ ಜಿಲ್ಲಾ ಆರೋಗ್ಯ ಇಲಾಖೆ ಕಚೇರಿಯಲ್ಲಿ ಚಾರ್ಜ್ಗೆ ಹಾಕಿದ್ದ ಸರಕಾರಿ ಲ್ಯಾಪ್‌ಟಾಪ್ ನಾಪತ್ತೆಯಾಗಿತ್ತು. ಈ ಸರಕಾರಿ ಲ್ಯಾಪ್‌ಟಾಪ್‌ನಲ್ಲಿ ಕೋವಿಡ್ ಸಂಬAಧಿತ ಡಾಟಾಗಳು, ಆರೋಗ್ಯ ಇಲಾಖೆ ಸಿಬ್ಬಂದಿಗಳ ಮಾಸಿಕ ವೇತನ ಮಾಹಿತಿ ಸಹಿತ ಎಲ್ಲಾ ಡಾಟಾಗಳು ಇದ್ದವು. ಈ ಲ್ಯಾಪ್‌ಟಾಪ್‌ನಲ್ಲಿ ಅಮೂಲ್ಯ ದಾಖಲಾತಿಗಳು ಇದ್ದ ಹಿನ್ನೆಲೆಯಲ್ಲಿ ಕಚೇರಿ ಸಿಬ್ಬಂದಿಗಳು ಈ ಕುರಿತು ಎಲ್ಲೆಡೆ ಹುಡುಕಾಡಿದ್ದರೂ ಕೂಡ ಲ್ಯಾಪ್ ಟಾಪ್ ಪತ್ತೆಯಾಗಿರಲಿಲ್ಲ.
ಬಳಿಕ ವೈದಾಧಿಕಾರಿ ಡಾ. ಆನಂದ್ ಎಂಬವರು ನಗರ ಪೊಲೀಸ್ ಠಾಣೆಗೆ ಲ್ಯಾಪ್ ಟಾಪ್ ಕಾಣೆಯಾಗಿರುವ ಬಗ್ಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ನಗರ ಪೊಲೀಸರು ಜಿಲ್ಲಾ ಆರೋಗ್ಯಾಧಿಕಾರಿಗಳ ಕಚೇರಿ ಸಂಕೀರ್ಣಕ್ಕೆ ತೆರಳಿ ತಾಂತ್ರಿಕ ಮಾಹಿತಿಗಳನ್ನು ಕಲೆ ಹಾಕಿದ್ದರು. ಬಳಿಕ ಚೈನ್‌ಗೇಟ್ ನಿವಾಸಿ ಸುಮಂತ್ ಎಂಬಾತನನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದ ಸಂದರ್ಭ ಕಳವು ಪ್ರಕರಣ ಪತ್ತೆಯಾಗಿದೆ. ಆತನ ಬಳಿಯಿದ್ದ ಸರಕಾರಿ ಲ್ಯಾಪ್ ಟಾಪ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾಮಿಶ್ರ ಹಾಗೂ ಮಡಿಕೇರಿ ಉಪ ವಿಭಾಗದ ಪೊಲೀಸ್ ಅಧೀಕ್ಷಕ ದಿನೇಶ್ ಕುಮಾರ್ ಮಾರ್ಗದರ್ಶನದಲ್ಲಿ ನಗರ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ, ಠಾಣಾಧಿಕಾರಿ ಕು. ಅಂತಿಮ, ಕ್ರೆöÊಂ ಸಿಬ್ಬಂದಿಗಳಾದ ದಿನೇಶ್ ಕೆ.ಕೆ, ಹೆಚ್.ಎಸ್. ಶ್ರೀನಿವಾಸ್, ಪ್ರವೀಣ್, ನಾಗರಾಜ್, ಠಾಣಾ ಸಿಬ್ಬಂದಿಗಳಾದ ಅರುಣ್ ಕುಮಾರ್, ಗಣಪತಿ, ದಿವ್ಯಾ, ಭವಾನಿ, ಸೌಮ್ಯ ಹಾಗೂ ಸಿಡಿಆರ್ ಶೆಲ್‌ನ ಗಿರೀಶ್ ಮತ್ತು ರಾಜೇಶ್ ಅವರುಗಳು ಪಾಲ್ಗೊಂಡಿದ್ದರು. ಫೋಟೋ :: ಕ್ರೆöÊಂ

Latest Indian news

Popular Stories

error: Content is protected !!