ಆಗಸ್ಟ್ ೧೪ ರಂದು “ಮೆಗಾ ಲೋಕ್ ಅದಾಲತ್”

ಕಲಬುರಗಿ,ಜು.೧೬(ಕ.ವಾ.) ನ್ಯಾಯಾಲಯಗಳಲ್ಲಿ ಚಾಲ್ತಿಯಲ್ಲಿರುವ ಪ್ರಕರಣಗಳು ಮತ್ತು ಇನ್ನೂ ನ್ಯಾಯಾಲಯಕ್ಕೆ ದಾಖಲಿಸದೇ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲು ೨೦೨೧ರ ಆಗಸ್ಟ್ ೧೪ ರಂದು ರಾಷ್ಟç ಮಟ್ಟಕ್ಕೆ ಸಂಬAಧಿಸಿದAತೆ ‘ಮೆಗಾ ಲೋಕ್ ಅದಾಲತ್’ ಆಯೋಜಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಕೆ. ಸುಬ್ರಮಣ್ಯ ಅವರು ತಿಳಿಸಿದರು.
ಕಲಬುರಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಎ.ಡಿ.ಆರ್.ಕಟ್ಟಡದಲ್ಲಿ ಶುಕ್ರವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟಿçÃಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಆಗಸ್ಟ್ ೧೪ ರಂದು ಕಲಬುರಗಿ ಜಿಲ್ಲಾ ನ್ಯಾಯಾಲಯ ಸೇರಿದಂತೆ ಆಳಂದ, ಅಫಜಲಪೂರ, ಚಿಂಚೋಳಿ, ಚಿತ್ತಾಪೂರ, ಜೇವರ್ಗಿ ಮತ್ತು ಸೇಡಂ ತಾಲೂಕು ಕಾನೂನು ಸೇವೆಗಳ ಸಮಿತಿಯಿಂದ ಸಹ “ಮೆಗಾ ಲೋಕ್ ಅದಾಲತ್’ ನಡೆಯಲಿದೆ ಎಂದು ಅವರು ವಿವರಿಸಿದರು.
ಈ ‘ಮೆಗಾ ಲೋಕ್ ಅದಾಲತ್’ನಲ್ಲಿ ನ್ಯಾಯಾಲಗಳಲ್ಲಿ ಚಾಲ್ತಿಯಲ್ಲಿರುವ ಪ್ರಕರಣಗಳು ಹಾಗೂ ಇನ್ನೂ ನ್ಯಾಯಾಲಯಕ್ಕೆ ದಾಖಲಿಸದೇ ಇರುವ ಪ್ರಕರಣಗಳನ್ನು ವ್ಯಾಜ್ಯ ಪೂರ್ವ ಪ್ರಕರಣಗಳೆಂದು ಪರಿಗಣ ಸಿ ಇತ್ಯರ್ಥಕ್ಕೆ ಪರಿಗಣ ಸಲಾಗುವುದು. ಇದಲ್ಲದೆ ವಿವಿಧ ಪ್ರಕರಣಗಳಾದ ಮೋಟಾರು ವಾಹನ ಅಪಘಾತ ಪರಿಹಾರ, ಅಸಲು ದಾವೆಗಳು, ಬ್ಯಾಂಕ್‌ಗಳಿಗೆ ಸಂಬAಧಿಸಿದ ಪ್ರಕರಣಗಳು, ಭೂಸ್ವಾಧೀನ ಪ್ರಕರಣಗಳು, ವೈವಾಹಿಕ ಹಾಗೂ ಜೀವಾನಂಶ, ಕಾನೂನಿನ್ವಯ ರಾಜೀ ಆಗಬಹುದಾದ ಕ್ರಿಮಿನಲ್, ಚೆಕ್ ಬೌನ್ಸ್ ಪ್ರಕರಣಗಳನ್ನು ಸಹ ಇತ್ಯಾರ್ಥಗೊಳಿಸಿ ಪರಿಹಾರ ನೀಡಲಾಗುವುದು ಎಂದು ಅವರು ಹೇಳಿದರು.
ಲೋಕ್ ಅದಾಲತ್ ದಿನದಂದು ಆನ್‌ಲೈನ್, ವಿಡಿಯೋ ಕಾನ್ಫೆರೆನ್ಸ್, ಇ-ಮೇಲ್, ಎಸ್.ಎಮ್.ಎಸ್., ವ್ಯಾಟ್ಸಾö್ಯಪ್, ಎಲೆಕ್ಟಾçನಿಕ್ ಮೋಡ್ ಅಥವಾ ಖುದ್ದಾಗಿ ಮೆಗಾ ಲೋಕ್ ಅದಾಲತ್‌ನಲ್ಲಿ ಹಾಜರಾಗುವ ಮೂಲಕ ಕಕ್ಷಿದಾರರು ಪ್ರಕರಣಗಳನ್ನು ಇತ್ಯಾರ್ಥಪಡಿಸಿಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ ಎಂದು ನ್ಯಾಯಾಧೀಶ ಕೆ.ಸುಬ್ರಮಣ್ಯ ತಿಳಿಸಿದರು.
ಈ ಕುರಿತು ಹೆಚ್ಚಿನ ವಿವರಗಳಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ತಾಲೂಕು ಕಾನೂನು ಸೇವಾ ಸಮಿತಿಯನ್ನು ಸಂಪರ್ಕಿಸಬಹುದಾಗಿದೆ. ನ್ಯಾಯವಾದಿಗಳು ಮತ್ತು ಕಕ್ಷಿದಾರರು ಈ ಮೆಗಾ ಲೋಕ್ ಅದಾಲತ್ ಸುಸೂತ್ರವಾಗಿ ನಡೆಯಲು ಸಹಕಾರ ನೀಡಬೇಕು ಎಂದು ಅವರು ಕೋರಿದರು.
ಪತ್ರಿಕಾಗೋಷ್ಠಿಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕಲಬುರಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸುಶಾಂತ ಎಂ. ಚೌಗಲೆ ಉಪಸ್ಥಿತರಿದ್ದರು.

Latest Indian news

Popular Stories

error: Content is protected !!