ಕಾಡಾನೆ ಹಾವಳಿ : ಕಾಫಿ, ಬಾಳೆತೋಟ ನಾಶ

ಮಡಿಕೇರಿ ಜೂ.೩ : ಸೋಮವಾರಪೇಟೆ ತಾಲ್ಲೂಕಿನ ಕೂತಿ ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದ್ದು ಕೃಷಿಕರು ಕಂಗಾಲಾಗಿದ್ದಾರೆ. ಗ್ರಾಮದಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳ ಹಿಂಡು ಕಾಫಿ, ಬಾಳೆ ತೋಟಗಳಿಗೆ ನುಗ್ಗಿ ಫಸಲನ್ನು ತಿಂದು ನಾಶಪಡಿಸುತ್ತಿವೆ.

Plague Destruction of coffee and plantation 2 Madikeri


ಗ್ರಾಮದ ಕೆ.ಡಿ.ಗಿರೀಶ್ ಅವರ ತೋಟದ ಕಾಫಿ ಗಿಡಗಳನ್ನು ಹಾಗೂ ಫಸಲು ಬಿಟ್ಟಿದ್ದ ಬಾಳೆ ಗಿಡಗಳನ್ನು ಕಾಡಾನೆಗಳು ನಾಶ ಪಡಿಸಿವೆ. ಅಲ್ಲದೆ ಅಕ್ಕಪಕ್ಕದ ಗ್ರಾಮಸ್ಥರ ಕಾಫಿಗಿಡ, ಬಾಳೆ, ರಾಸಾಯನಿಕ ಗೊಬ್ಬರ ತುಂಬಿದ ಚೀಲಗಳನ್ನು ಹಾಳು ಮಾಡಿವೆ.
೪ ರಿಂದ ೫ ಆನೆಗಳಿರುವ ಹಿಂಡು ಕೂತಿ, ನಗರಳ್ಳಿ ಭಾಗದಲ್ಲಿ ಸಂಚರಿಸುತ್ತಿವೆ. ಮಾಲೀಕರು ಹಾಗೂ ಕಾರ್ಮಿಕರು ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಅರಣ್ಯಾಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಬೇಕು ಮತ್ತು ನಿರಂತರ ದಾಳಿ ನಡೆಸುವ ಆನೆಗಳನ್ನು ಕಾಡಿಗಟ್ಟಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Latest Indian news

Popular Stories

error: Content is protected !!