ಮುಂಬಯಿ ದುರಂತದಲ್ಲಿ ಮೃತರಿಗೆ ಪರಿಹಾರ ಘೋಷಿಸಿದ ಪ್ರಧಾನಿ

ನವದೆಹಲಿ: ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆಯಿಂದ ಕಾಂಪೌAಡ್ ಗೋಡೆ ಕುಸಿದು ಸಂಭವಿಸಿದ ದುರ್ಘಟನೆಯಲ್ಲಿ ಹಲವು ಮಂದಿ ಸಾವನ್ನಪ್ಪಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ತೀವ್ರ ದು:ಖ ವ್ಯಕ್ತಪಡಿಸಿದ್ದಾರೆ.
ಈ ದುರ್ಘಟನೆಯಲ್ಲಿ ಮೃತಪಟ್ಟ ಕುಟುಂಬ ಸದಸ್ಯರಿಗೆ ತಲಾ ಎರಡು ಲಕ್ಷ ರೂ. ಹಾಗೂ ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರವನ್ನು ಪ್ರಧಾನ ಮಂತ್ರಿ ರಾಷ್ಟ್ರೀಯ ವಿಪತ್ತು ನಿಧಿಯಿಂದ ಘೋಷಿಸಲಾಗಿದೆ.
ಮುಂಬೈ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ರಾತ್ರಿಯಿಡೀ ಸುರಿದ ಭಾರೀ ಮಳೆಯಿಂದಾಗಿ ಪ್ರತ್ಯೇಕ ಘಟನೆಗಳಲ್ಲಿ 15 ಮಂದಿ ಸಾವನ್ನಪ್ಪಿದ್ದಾರೆ. ಮುಂಬೈ ನಗರ ಜಲಾವೃತಗೊಂಡಿದ್ದು, ಸ್ಥಳೀಯ ರೈಲು ಸಂಚಾರ ಮತ್ತು ವಾಹನಗಳ ಸಂಚಾರಕ್ಕೆ ತೀವ್ರ ಅಡಚಣೆಯುಂಟಾಗಿದೆ.
ಮುAಬೈನ ಚೆಂಬೂರು ಮತ್ತು ವಿಖ್ರೋಲಿಯಲ್ಲಿ ಗೋಡೆ ಕುಸಿದು ಉಂಟಾದ ಪ್ರಾಣಹಾನಿಯಿಂದ ದುಃಖಿತನಾಗಿದ್ದೇನೆ. ದುಃಖದ ಈ ಸಮಯದಲ್ಲಿ ನನ್ನ ಆಲೋಚನೆಗಳು ದುಃಖಿತ ಕುಟುಂಬಗಳೊAದಿಗೆ ಇವೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ಪ್ರಾರ್ಥಿಸುವುದಾಗಿ ಪ್ರಧಾನಿ ಟ್ವೀಟ್ ಮಾಡಿದ್ದಾರೆ.

Latest Indian news

Popular Stories

error: Content is protected !!