ಪರೀಕ್ಷಾ ಕೇಂದ್ರದಲ್ಲಿ ಸಿಸಿಟಿವಿ ಕಡ್ಡಾಯ: ಜಿಲ್ಲಾಧಿಕಾರಿ ಆರ್. ವೆಂಕಟೇಶ್ ಕುಮಾರ್

ರಾಯಚೂರು, ಜೂ.೨೮, (ಕ.ವಾ):- ಎಸ್.ಎಸ್.ಎಲ್.ಸಿ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕಡ್ಡಾಯ. ಸಿಸಿಟಿವಿ ಇಲ್ಲದ ಪರೀಕ್ಷಾ ಕೇಂದ್ರಗಳನ್ನು ಕಪ್ಪುಪಟ್ಟಿಗೆ ಸೇರಿಸುವಂತೆ ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ್ ಅವರು ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಅವರು ಜೂ. ೨೮ರ ಸೋಮವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿಯ ವಿಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ಬೆಂಗಳೂರಿನಿAದ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರೊಂದಿಗೆ ವಿಡಿಯೋ ಕಾನ್ಫರೆನ್ಸ್ನಲ್ಲಿ ಭಾಗವಹಿಸಿ ನಂತರ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಈ ನಿರ್ದೇಶನ ನೀಡಿದರು.

ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಕೈಗೊಳ್ಳಬೇಕಾದ ಎಲ್ಲಾ ಸಿದ್ದತೆಗಳ ಆರಂಭ ಮಾಡಿಕೊಳ್ಳಬೇಕು, ಕೋವಿಡ್ ಹಿನ್ನಲೆಯಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಸಹ ಕೈಗೊಳ್ಳಬೇಕು, ಬಹು ಮುಖ್ಯವಾಗಿ ಪ್ರಶ್ನೆಪತ್ರಿಕೆ ಸೋರಿಕೆ ಆಗದಂತೆ ಕಟ್ಟೆಚ್ಚರ ವಹಿಸಬೇಕು, ಪ್ರಶ್ನೆಪತ್ರಿಕೆಗಳನ್ನು ಜಿಲ್ಲಾ ಖಜಾನೆಯಲ್ಲಿ ಸಿಸಿಟಿವಿ ನಿಗಾವಣೆಯಲ್ಲಿ ಇರಿಸಬೇಕು, ಅದರಂತೆ ತಾಲೂಕ ಕೇಂದ್ರಗಳ ಖಜಾನೆಯಲ್ಲಿಯೂ ಸಿಸಿಟಿವಿ ಇರಬೇಕು ಎಂದರು.

ಪರೀಕ್ಷಾ ಕೇಂದ್ರಗಳಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗಳು ಮತ್ತು ಪರೀಕ್ಷೆಗೆ ಕುಳಿತುಕೊಳ್ಳುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಕೋವಿಡ್ ಲಸಿಕೆ ಪಡೆದಿರಬೇಕು, ಪರೀಕ್ಷಾ ಕೇಂದ್ರಗಳಿಗೆ ಬರುವ ವಿದ್ಯಾರ್ಥಿಗಳಿಗೆ ಅಗತ್ಯ ಸಾರಿಗೆ ಸೌಕರ್ಯಗಳನ್ನು ಕಲ್ಪಿಸಿಕೊಡುಂತೆ ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಪ್ರತಿ ಪರೀಕ್ಷಾ ಕೊಠಡಿಯಲ್ಲಿ ೧೨ ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ಕಲ್ಪಿಸಿಕೊಡಬೇಕು, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. ಪರೀಕ್ಷಾ ಕೇಂದ್ರಕ್ಕೆ ಒಂದು ಪ್ರವೇಶದ್ವಾರ ಮಾತ್ರ ಗುರುತಿಸಿ, ಅಲ್ಲಿ ಥರ್ಮಲ್ ಸ್ಕ್ಯಾನರ್, ಮಾಸ್ಕ್ ಮತ್ತು ಸ್ಯಾನಿಟೈಸರ್ ವ್ಯವಸ್ಥೆ ಮಾಡಬೇಕು, ಪ್ರತಿ ಪರೀಕ್ಷಾ ಕೇಂದ್ರಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಭೇಟಿ ನೀಡಿ ಅಲ್ಲಿನ ವಿದ್ಯಾರ್ಥಿಗಳ ಸಾಂದ್ರತೆ, ಸಿಸಿಟಿವಿ ಕಾರ್ಯನಿರ್ವಹಣೆ ಬಗ್ಗೆ ಖಾತ್ರಿಪಡಿಸಿಕೊಂಡು, ಅಲ್ಲಿ ಬೇಕಾದ ಅಗತ್ಯ ಸಲಕರಣೆಗಳು ಮುಂಚಿತವಾಗಿ ಸಂಬAಧಿತ ಅಧಿಕಾರಿಗಳಿಗೆ ನೀಡಬೇಕು ಎಂದರು.
ಪರೀಕ್ಷಾ ಕೇಂದ್ರಗಳ ಸುತ್ತಲೂ ೨೦೦ ಮೀಟರ್ ಅಂತರದಲ್ಲಿ ಇರುವ ಕಂಪ್ಯೂಟರ್, ಜೆರಾಕ್ಸ್ ಸೆಂಟರ್, ಸೈಬರ್ ಸೆಂಟರ್‌ಗಳನ್ನು ಮುಚ್ಚಬೇಕು, ಪರೀಕ್ಷಾ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳಿಗೆ ಮುಂಚಿತವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಪರೀಕ್ಷಾ ಕೇಂದ್ರಗಳಿಗೆ ಅಗತ್ಯವಿರುವ ಥರ್ಮಲ್ ಸ್ಕಾö್ಯನರ್, ಸ್ಯಾನಿಟೈಜರ್, ಮಾಸ್ಕ್ಗಳನ್ನು ಒದಗಿಸುವಂತೆ ಡಿಎಚ್‌ಒ ಡಾ. ರಾಮಕೃಷ್ಣ ಅವರಿಗೆ ಸೂಚಿಸಿದರು.
ಕೋವಿಡ್ ಪಾಸಿಟಿವ್ ಸೋಂಕಿತ ಪರೀಕ್ಷಾರ್ಥಿಗಳಿಗೆ ಕೋವಿಡ್ ಕೇರ್ ಕೇಂದ್ರಗಳಲ್ಲಿ ಪರೀಕ್ಷೆ ಬರೆಯುವುದಕ್ಕೆ ಅವಕಾಶ ಕಲ್ಪಿಸಬೇಕು. ಪರೀಕ್ಷ ಕೇಂದ್ರಗಳಲ್ಲಿ ಜ್ವರ, ಕೆಮ್ಮು ಇರುವ ವಿದ್ಯಾರ್ಥಿಗಳು ಕಂಡು ಬಂದಲ್ಲಿ ಪ್ರತ್ಯೆಕ ಕೊಠಡಿಯಲ್ಲಿ ಪರೀಕ್ಷೆ ಬರೆಯುವುದಕ್ಕೆ ಅವಕಾಶ ಕಲ್ಪಿಸಬೇಕು ಹಾಗೂ ಪ್ರತಿಯೊಂದು ಪರೀಕ್ಷ ಕೇಂದ್ರದಲ್ಲಿ ಶೆಂಕಿತರಿಗೆ ಒಂದು ಕೊಠಡಿ ಮೀಸಲಿಡುವಂತೆ ತಿಳಿಸಿದರು.

ಪರೀಕ್ಷೆ ನಡೆಯುವ ದಿನಗಳಲ್ಲಿ ಪರೀಕ್ಷಾ ಕೇಂದ್ರದ ಸುತ್ತಲೂ ಪೊಲೀಸರು ಭದ್ರತೆ ಒದಗಿಸಬೇಕು, ಅವರು ಬೆಳಿಗ್ಗೆ ೮ ಗಂಟೆಗೆ ಪರೀಕ್ಷಾ ಕೇಂದ್ರದಲ್ಲಿ ಹಾಜರಿರುವಂತೆ ಸೂಚನೆ ನೀಡುವಂತೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶ್ರೀ ಹರಿಬಾಬು ಅವರಿಗೆ ಜಿಲ್ಲಾಧಿಕಾರಿ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಖ್ ತನ್ವೀರ್ ಆಸೀಫ್, ಅಪರ ಜಿಲ್ಲಾಧಿಕಾರಿ ಕೆ.ಆರ್. ದುರುಗೇಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಮಕೃಷ್ಣ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು, ಜಿಲ್ಲೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೇರಿದಂತೆ ಸಂಬAಧಿಸಿದ ಅಧಿಕಾರಿಗಳು ಸಭೆಯಲ್ಲಿದ್ದರು. 

ಅಲ್ಪಸಂಖ್ಯಾತರಿಗೆ ಶೇ.೧೫ರಷ್ಟು ಅನುದಾನ ಮೀಸಲಿಡುವಂತೆ ಎಡಿಸಿ ಸೂಚನೆ
ರಾಯಚೂರು, ಜೂ.೨೮, (ಕ.ವಾ):- ಅಲ್ಪಸಂಖ್ಯಾತರು ಹೆಚ್ಚಿರುವ ತಾಲೂಕುಗಳಲ್ಲಿ ಶೇ.೧೫ ರಷ್ಟು ಅನುದಾನವನ್ನು ಕಡ್ಡಾಯವಾಗಿ ಮೀಸಲಿಡುವಂತೆ ಅಪರ ಜಿಲ್ಲಾಧಿಕಾರಿ ಕೆ.ಆರ್. ದುರುಗೇಶ್ ಅವರು ಸಂಬAಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಅವರು ಜೂ.೨೮ರ ಸೋಮವಾರ ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಪ್ರಧಾನಮಂತ್ರಿ ೧೫ ಅಂಶಗಳ ಕಾರ್ಯಕ್ರಮದ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಜಿಲ್ಲಾ ಅಲ್ಪಸಂಖ್ಯಾತರ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸೇರಿದಂತೆ ನಗರಸಭೆ, ಪಟ್ಟಣ ಪಂಚಾಯತ್, ಪುರಸಭೆ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ಪ್ರಧಾನಮಂತ್ರಿಗಳ ೧೫ ಅಂಶಗಳ ಕಾರ್ಯಕ್ರಮವನ್ನು ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಗೊಳಿಸಿ, ನಿಗದಿ ಪಡಿಸಿದ ಸೂಚ್ಯಂಕಗಳAತೆ ಕಾರ್ಯಕ್ರಮಗಳನ್ನು ಜಾರಿಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲೆಯ ಸಿಂಧನೂರು ಮತ್ತು ರಾಯಚೂರು ನಗರಸಭೆ ವ್ಯಾಪ್ತಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಅಲ್ಪಸಂಖ್ಯಾತರು ವಾಸವಾಗಿದ್ದು, ಅವರ ಜನಸಂಖ್ಯೆಗೆ ಅನುಗುಣವಾಗಿ ನಿರ್ದಿಷ್ಟ ಪ್ರಮಾಣದ ಅನುದಾನ ಮೀಸಲಿಟ್ಟು ಕ್ರಿಯಾ ಯೋಜನೆ ರೂಪಿಸುವಂತೆ ನಗರಸಭೆ ಪೌರಾಯುಕ್ತರಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ಈ ವೇಳೆ ಸಂಬAಧಿಸಿದ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Latest Indian news

Popular Stories

error: Content is protected !!