ಸರ್ಕಾರ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸುವಂತೆ ಕೆ.ಎಸ್ ಈಶ್ವರಪ್ಪ ಸೂಚನೆ

ರಾಯಚೂರು, ಜೂ.೮ (ಕ.ವಾ):- K S Eshwarappa ಅಪಾಯಕಾರಿ ಸೋಂಕು ಕೋವಿಡ್ ನಿಯಂತ್ರಣಕ್ಕೆ ಜಿಲ್ಲೆಯ ನಗರದ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಅತ್ಯಂತ ಕಟ್ಟುನಿಟ್ಟಾಗಿ ಪಾಲಿಸುವಂತೆ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೆ. ಎಸ್ ಈಶ್ವರಪ್ಪ ಅವರು ಸೂಚನೆ ನೀಡಿದರು.

ಅವರು ಜೂ ೮ರ ಮಂಗಳವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೋವಿಡ್-೧೯ ಸೋಂಕು ಗ್ರಾಮೀಣ ಪ್ರದೇಶದಲ್ಲಿ ಹರಡುವುದನ್ನು ತಡೆಯಲು ಗ್ರಾಮ ಪಂಚಾಯತ್‌ಗಳಿAದ ತೆಗೆದುಕೊಂಡ ಕ್ರಮಗಳ ಕುರಿತು ಹಮ್ಮಿಕೊಳ್ಳಲಾಗಿದ್ದ ಪರಿಶೀಲನೆ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕೊರೋನಾ ಸೋಂಕುನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಲಾಕ್‌ಡೌನ್ ಘೋಷಿಸಿ, ಅನುಷ್ಠಾನದ ಮಾರ್ಗಸೂಚಿಗಳನ್ನು ಪ್ರಕಟಿಸಿದೆ, ಈ ಸಂದರ್ಭದಲ್ಲಿ ಅವುಗಳನ್ನು ಸಡಿಲಿಸುವುದು ಅಥವಾ ಅದರ ಪಾಲನೆಯಲ್ಲಿ ಅಪಚಾರವಾಗಬಾರದು, ಮುಖ್ಯವಾಗಿ ಯಾವುದೇ ಜನ ಪ್ರತಿನಿಧಿಗಳು ಮತ್ತು ಅಧಿಕಾರಿಗಳ ಒತ್ತಡಕ್ಕೆ ಮಣ ದು, ಅನುಷ್ಠಾನ ಕ್ರಮಗಳನ್ನು ಸಡಿಲಿಕೆ ಮಾಡಬಾರದು, ಸಾಧ್ಯವಾದರೆ ಕೋವಿಡ್ ನಿಯಂತ್ರಣಕ್ಕೆ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳೊಂದಿಗೆ ಜೂನ್೧೪ರ ವರೆಗೆ ಇನ್ನಷ್ಟು ಬಿಗಿಯಾದ ಕ್ರಮ ಕೈಗೊಳ್ಳುವಂತೆ ಅವರು ತಿಳಿಸಿದರು.
ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು ಸೇರಿದಂತೆ ಗ್ರಾಮೀಣ ಭಾಗದಲ್ಲಿ ನಿಯಂತ್ರಣಕ್ಕೆ ಕ್ರಮವಹಿಸಿರುವ ಎಲ್ಲಾ ಅಧಿಕಾರಿ, ಸಿಬ್ಬಂದಿಗಳು ಈ ರೀತಿ ಕ್ರಮ ವಹಿಸಿ ಕೊರೋನಾ ಸೋಂಕನ್ನು ನಿಯಂತ್ರಿಸಬೇಕು, ಪ್ರಮುಖವಾಗಿ ಜನ ರಸ್ತೆ ಮೇಲೆ ಬರಬಾರದು, ಮನೆಯಲ್ಲಿಯೇ ಇದ್ದು ಕೋವಿಡ್ ಸೋಂಕು ಹತ್ತದಂತೆ ಎಚ್ಚರ ವಹಿಸಬೇಕು, ಜೂ.೧೪ರ ನಂತರ ಸರ್ಕಾರದ ತೀರ್ಮಾನದಂತೆ ಕಾರ್ಯಪ್ರವೃತ್ತರಾಗಬೇಕು ಎಂದವರು ಹೇಳಿದರು.

ಇಡೀ ರಾಜ್ಯದಲ್ಲಿ ಹೋಂ ಐಸೋಲೇಷನ್ ಪದ್ದತಿ ಇಲ್ಲ, ಅದನ್ನು ರದ್ದು ಪಡಿಸಲಾಗಿದ್ದು, ಸೋಂಕಿತರು ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್ ಅಥವಾ ಆಸ್ಪತ್ರೆಗೆ ದಾಖಲಾಗಬೇಕು, ಕೋವಿಡ್ ನಿಯಂತ್ರಣಕ್ಕೆ ಅನುಕೂಲವಾಗುವಂತೆ ಪ್ರತಿ ಗ್ರಾಮ ಪಂಚಾಯತ್‌ಗೆ ೫೦ ಸಾವಿರ ರೂ.ಗಳ ಅನುದಾನ ನೀಡಲಾಗಿದೆ, ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕು, ಗ್ರಾಮೀಣ ಪ್ರದೇಶ ಸೇರಿದಂತೆ ರಾಜ್ಯದಲ್ಲಿ ಎಲ್ಲಿಯೂ ಜಾತ್ರೆ, ಮದುವೆಗೆ ಅವಕಾಶವಿಲ್ಲ, ಕಠಿಣ ಕ್ರಮಗಳಿಂದಾಗಿ ಕೋವಿಡ್ ಪಾಸಿಟಿವಿಟಿ ರೇಟ್ ಕಡಿಮೆಯಾಗುತ್ತಿದೆ ಎಂದವರು ತಿಳಿಸಿದರು. 

ಜಿಲ್ಲೆಯ ೭ ನಗರಗಳ ಹಾಗೂ ಗ್ರಾಮೀಣ ಪ್ರದೇಶಗಳ ಮನೆ ಮನೆಗೆ ನಲ್ಲಿ ಮೂಲಕ ನೀರು ಸರಬರಾಜು ಮಾಡುವ ಜಲಜೀವನ್ ಮೀಷನ್ ಯೋಜನೆಯಡಿ ೧,೯೯೮ಕೋಟಿ ರೂಪಾಯಿಗಳ ಯೋಜನೆ ಮಂಜೂರಾಗಿದೆ, ಮುಂಬರುವ ಜುಲೈ ಮೊದಲ ವಾರದಲ್ಲಿ ಟೆಂಡರ್ ಪ್ರಕ್ರಿಯೆ ಆರಂಭಿಸುವAತೆ ಸೂಚಿಸಿದ ಸಚಿವರು, ಗ್ರಾಮೀಣ ಭಾಗದಲ್ಲಿ ಕೂಡಿಯುವ ನೀರು ಸರಬರಾಜು ಮಾಡುವ ಸಂದರ್ಭದಲ್ಲಿ ನೀರಿನ ಮೂಲ ಲಭ್ಯ ವಿದ್ದರೆ ಮಾತ್ರ ಆ ಯೋಜನೆಯಡಿ ಕಾರ್ಯಪ್ರವೃತ್ತರಾಗಬೇಕು. ಇಲ್ಲವಾದರೆ ಯೋಜನೆ ಅಂದಾಜು ವೆಚ್ಚ ಒಂದಾದರೆ ಅನುಷ್ಟಾನ ಸಮಯದಲ್ಲಿ ಮಾಡುವ ವೆಚ್ಚ ಮತ್ತೊಂದಾಗುತ್ತದೆ, ಅದಕ್ಕಾಗಿ ಸಾವಿರಾರು ಕೋಟಿ ರೂ.ಗಳನ್ನು ವೆಚ್ಚಮಾಡುವ ಯೋಜನೆಗಳು ಕೂಡಲೇ ಅನುಷ್ಠನಾವಾಗಿ, ನೈಜ ಫಲಾನುಭವಿಗಳಿಗೆ ಅದರ ಲಾಭ ತಲುಪಬೇಕು. ಕುಡಿಯುವ ನೀರು ಪೂರೈಕೆ ಯೋಜನೆಗಳಡಿ ಅನುಷ್ಠಾನಕ್ಕೆ ವಿಳಂಬವಾದ ಸ್ಕೀಂಗಳನ್ನು ಕೂಡಲೇ ಒಂದು ರೂಪ ನೀಡಿ, ಅವುಗಳನ್ನು ಸಮಪರ್ಕವಾಗಿ ಅನುಷ್ಠಾನಗೊಳಿಸಲು ಕೂಡಲೇ ಸಂಸದರು ಹಾಗೂ ಶಾಸಕರೊಂದಿಗೆ ಚರ್ಚಿಸುವಂತೆ ತಿಳಿಸಿದ ಅವರು, ಅಗತ್ಯ ಅನುದಾವನ್ನು ನೀಡುವುದಾಗಿ ಹೇಳಿದರು.

ಕುಡಿಯುವ ನೀರು ಯೋಜನೆ ಅನುಷ್ಠಾನ ಸಂದರ್ಭದಲ್ಲಿ ಸಂಬAಧಿಸಿದ ವಿಧಾನಸಭಾ ಕ್ಷೇತ್ರಗಳ ಶಾಸಕರಿಗೆ ಶಿಷ್ಠಾಚಾರದಂತೆ ಮಾಹಿತಿ ನೀಡಿ, ಭೂಮಿ ಪೂಜೆಗೆ ಅವರನ್ನು ಆಹ್ವಾನಿಸಬೇಕು, ಇದನ್ನು ಉಲ್ಲಂಘಿಸಿದ್ದಲ್ಲೀ ಸಂಬAಧಿಸಿದ ಅಧಿಕಾರಿಗಳ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.

ಮಾನವಿ ವಿಧಾನಸಭಾ ಕ್ಷೇತ್ರದ ಶಾಸಕ ರಾಜಾ ವೆಂಕಟಪ್ಪ ನಾಯಕ್ ಮಾತನಾಡಿ, ಜಕ್ಕಲದಿನ್ನಿ ಗ್ರಾಮದ ಬಹುಗ್ರಾಮ ಕುಡಿಯುವ ನೀರಿನ ಕಾಮಗಾರಿ ಭೂಮಿ ಪೂಜೆ ತಮ್ಮನ್ನು ಆಹ್ವಾನಿಸಿಲ್ಲ, ಶಿಷ್ಠಾಚಾರ ಉಲ್ಲಂಘಿಸಿದ್ದು, ಸಂಬAಧಿಸಿದ ಅಧಿಕಾರಿಗಳ ವಿರುದ್ಧ ವಿಧಾನಸಭೆಯ ಸಭಾಪತಿಗಳಿಗೆ ಹಕ್ಕುಚ್ಯುತಿ ಮಂಡಿಸುವ ಕುರಿತು ತಿಳಿಸಿದರು.

ಈ ವೇಳೆ ಮಾತನಾಡಿದ ಗ್ರಾಮೀಣ ಒಳಚರಂಡಿ ಹಾಗೂ ಕುಡಿಯುವ ನೀರು ಸರಬರಾಜು ಕಾರ್ಯನಿರ್ವಹಕ ಅಭಿಯಾಂತರ ಗಣಪತಿ ಸಾಕರೆ, ಮಾನವಿ ತಾಲೂಕಿನ ಜಕ್ಕಲದಿನ್ನಿ ಗ್ರಾಮದಲ್ಲಿ ೧.೭೦ ಕೋಟಿ ರೂ.ಗಳ ಬಹುಗ್ರಾಮ ಕುಡಿಯುವ ನೀರಿನ ಕಾಮಗಾರಿಗೆ ಭೂಮಿ ಪೂಜೆಗೆ ಸ್ಥಳಿಯ ಶಾಸಕರಿಗೆ ಮಾಹಿತಿ ನೀಡಲಾಗಿತ್ತು, ಆದರೆ ಪೂಜಾ ಕಾರ್ಯನಿರ್ವಹಿಸಿಲ್ಲ ಎಂದು ಮಾಹಿತಿ ನೀಡಿದರು.

ಕೋವಿಡ್ ಸಂಕಷ್ಟ ಸಮಯದಲ್ಲಿ ಗ್ರಾಮೀಣ ಕೂಲಿಕಾರಿಗೆ ಅನುಕೂಲ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಯಾವುದೇ ಕಾರಣಕ್ಕೂ ಕೂಲಿ ಕಾಮಗಾರಿಗಳನ್ನು ನಿಲ್ಲಿಸುವುದಿಲ್ಲ, ಜಾಬ್ ಕಾರ್ಡ್ ಇಲ್ಲದಿದ್ದರೆ ಒಂದು ತಿಂಗಳೊಳಗೆ ವಿತರಿಸಬೇಕು, ನರೇಗಾದಲ್ಲಿ ಕೂಲಿಗೆ ಬರುವ ಕಾರ್ಮಿಕರು ಕೋವಿಡ್ ತಪಾಸಣೆಗೆ ಒಳಗಾಗಿರಬೇಕು. ಕೂಲಿಕಾರಿಗೆ ಕೋವಿಡ್ ಲಕ್ಷಣಗಳು ಕಂಡು ಬಂದರೆ ಅವರನ್ನು ವಾಪಸ್ ಕಳುಹಿಸಲಾಗುವುದು, ಗ್ರಾಮ ಪಂಚಾಯತ್ ಮಟ್ಟದಲ್ಲಿ ಕ್ರಿಯಾ ಯೋಜನೆ ರೂಪಿಸಿ ಕೂಲಿ ಕೆಲಸ ನೀಡುವಂತೆ ಅವರು ನಿರ್ದೇಶನ ನೀಡಿದರು.

ಸಂಸದರಾದ ರಾಜಾ ಅಮರೇಶ್ವರ ನಾಯಕ್, ಸಂಗಣ್ಣ ಕರಡಿ, ಜಿಲ್ಲಾಧಿಕಾರಿ ಆರ್. ವೆಂಕಟೇಶ್ ಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಖ್ ತನ್ವೀರ್ ಆಸೀಫ್, ಶಾಸಕರಾದ ಡಾ. ಶಿವರಾಜ ಪಾಟೀಲ್, ರಾಜಾ ವೆಂಕಟಪ್ಪ ನಾಯಕ್, ವೆಂಕಟರಾವ್ ನಾಡಗೌಡ, ಸುರಪುರ ಶಾಸಕ ನರಸಿಂಹ ನಾಯಕ್ ಮಾತನಾಡಿದರು.
ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆಯುಕ್ತ ಅನಿರುದ್ದ ಶ್ರವಣ್ ವೇದಿಕೆಯಲ್ಲಿದ್ದರು.
ಪಂಚಾಯತ್ ರಾಜ್ ಇಲಾಖೆಯ ಗ್ರೆಡ್ -೨ ನಿರ್ದೇಶಕ ಕೆ. ರೇವಣಪ್ಪ, ಅಪರ ಜಿಲ್ಲಾಧಿಕಾರಿ ಕೆ.ಆರ್. ದುರುಗೇಶ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಶಶಿಕಾಂತ್ ಶಿವಪುರೆ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾ ನಿರ್ದೇಶಕ ಡಾ. ಟಿ ರೋಣ , ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ರಾಮಕೃಷ್ಣ, ಡಿಎಸ್‌ಒ ಡಾ. ನಾಗರಾಜ್, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ಸುರೇಂದ್ರ ಬಾಬು, ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ. ಮಲ್ಲಿಕಾರ್ಜುನ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿದ್ದರು.

ಜಿ.ಪಂ. ಮುಖ್ಯ ಯೋಜನಾಧಿಕಾರಿ ಟಿ. ರೋಣ ಸ್ವಾಗತಿಸಿದರು.

Latest Indian news

Popular Stories

error: Content is protected !!