ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ೩೦,೨೭೮ ವಿದ್ಯಾರ್ಥಿಗಳು ಹಾಜರು, ೨೨೫ ವಿದ್ಯಾರ್ಥಿಗಳ ಗೈರು:

ರಾಯಚೂರು, ಜು.೧೯, (ಕ.ವಾ):- ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಆಯೋಜಿಸಿರುವ, ೨೦೨೧ರ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಜಿಲ್ಲೆಯ ಎಲ್ಲಾ ೧೭೯ ಪರೀಕ್ಷೆ ಕೇಂದ್ರಗಳಲ್ಲಿ ಸುಸೂತ್ರವಾಗಿ ಪರೀಕ್ಷೆ ಆರಂಭಗೊAಡಿವು.

ಸೋಮವಾರ ದಂದು ನಡೆದ ಸಮಾಜ ವಿಜ್ಞಾನ, ಗಣ ತ ಹಾಗೂ ವಿಜ್ಞಾನ ಪರೀಕ್ಷೆಗೆ ೩೦,೫೦೩ ವಿದ್ಯಾರ್ಥಿಗಳು ನೋಂದಣ ಮಾಡಿಕೊಂಡಿದ್ದರು. ಅವರಲ್ಲಿ ೩೦,೨೭೮ ವಿದ್ಯಾರ್ಥಿಗಳು ಹಾಜರಾದರು, ೨೨೫ ಮಕ್ಕಳು ಗೈರು ಹಾಜರಾಗಿದ್ದರು.

ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಾಮಾಜಿಕ ಅಂತರದೊAದಿಗೆ ಶಿಸ್ತು ಬದ್ಧವಾಗಿ ಆಸನ ವ್ಯವಸ್ಥೆ ಕಲ್ಪಿಸಲಾಗಿತ್ತು. ವಿದ್ಯಾರ್ಥಿಗಳ ಆರೋಗ್ಯದ ದೃಷ್ಠಿಯಿಂದ ಮುಂಜಾಗ್ರತಾ ಕ್ರಮವಾಗಿ ಪ್ರತ್ಯೇಕ ಕೊಠಡಿಗಳಲ್ಲಿ ಆಸನ ವ್ಯವಸ್ಥೆ ಕಲ್ಪಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಯಿತು.

ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಿಬ್ಬಂದಿಗಳು, ಭಾರತ ಸ್ಕೌಟ್ಸ ಮತ್ತು ಗೈಡ್ಸ್, ನೆರವಿನೊಂದಿಗೆ ಮಕ್ಕಳ ಆರೋಗ್ಯ ತಪಾಸಣೆ ಸ್ಯಾನಿಟೈಸರ್ ಬಳಕೆ, ಕಡ್ಡಾಯವಾಗಿ ನಡೆಸಲಾಯಿತು.

ವಿವಿಧ ಗ್ರಾಮೀಣ ಪ್ರದೇಶಗಳಿಂದ ಆಗಮಿಸುವ ಮಕ್ಕಳಿಗಾಗಿ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವತಿಯಿಂದ ಉಚಿತ ಬಸ್ ಸೌಕರ್ಯ ಕಲ್ಪಿಸಲಾಗಿತು. ಶಿಕ್ಷಣ ಇಲಾಖೆಯು ಮಾರ್ಗ ಅಧಿಕಾರಿಗಳನ್ನು ನೇಮಿಸಲಾಗಿತ್ತು. ಎಲ್ಲಾ ಮಕ್ಕಳಿಗೂ ಸಮರ್ಪಕ ಮಾಹಿತಿ ನೀಡಿ ಪರೀಕ್ಷೆಗೆ ಹಾಜರಾಗುವಂತೆ ಪ್ರೋತ್ಸಾಹಿಸಿ ಕರೆತಂದಿದ್ದು ವಿಶೇಷವಾಗಿತ್ತು.

Latest Indian news

Popular Stories

error: Content is protected !!