ವಿಶ್ವ ಪರಂಪರೆ ತಾಣ, ರಾಮಪ್ಪ ದೇವಸ್ಥಾನಕ್ಕೆ ಹೆಚ್ಚಿನ ಭದ್ರತೆ

ಮುಲುಗು: ವಿಶ್ವ ಪರಂಪರೆಯ ತಾಣಗಳ ಪಟ್ಟಿಗೆ ಸೇರಿರುವ ತೆಲಂಗಾಣದ ವಾರಂಗಲ್ ಜಿಲ್ಲೆಯ ಪಾಲಂಪೇಟ್ ಗ್ರಾಮದಲ್ಲಿರುವ ರಾಮಪ್ಪ ದೇವಾಲಯಕ್ಕೆ ಭಾರತೀಯ ಪುರಾತತ್ವ ಇಲಾಖೆಯು ಭದ್ರತೆಯನ್ನು ಹೆಚ್ಚಿಸಿದೆ.
ಈ ಹಿಂದೆ ಭಾರತೀಯ ಪುರಾತತ್ವ ಇಲಾಖೆಯು ದೇವಾಲಯಕ್ಕೆ ಪೊಲೀಸ್ ಭದ್ರತೆ ಒದಗಿಸುವಂತೆ ತೆಲಂಗಾಣ ರಾಜ್ಯ ಸರ್ಕಾರಕ್ಕೆ ಪತ್ರ ಬರೆದು ಸೂಚಿಸಿತ್ತು. ಆದರೆ, ಸರ್ಕಾರದಿಂದ ಯಾವುದೇ ರೀತಿಯ ಪ್ರತಿಕ್ರಿಯೆಗಳು ವ್ಯಕ್ತವಾಗದ ಹಿನ್ನೆಲೆಯಲ್ಲಿ, ಇಲಾಖೆಯೇ ದೇವಾಲಯಕ್ಕೆ ಭದ್ರತೆಯೊದಗಿಸಲು ನಿರ್ಧರಿಸಿದೆ.
ಪುರಾತತ್ವ ಇಲಾಖೆಯ ಅಧಿಕಾರಿಗಳು ಮಾತನಾಡಿ, ಈಗಾಗಲೇ ದೇವಾಲಯಕ್ಕೆ ತರಬೇತಿ ಪಡೆದ 6 ಮಂದಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.

Latest Indian news

Popular Stories

error: Content is protected !!