ಕೇಂದ್ರ ಸಚಿವ ಸಂಪುಟ ಪುನಾರಚನೆಗೆ ಮುಹೂರ್ತ ನಿಗದಿ

ನವದೆಹಲಿ: ಬಹುನಿರೀಕ್ಷಿತ ಕೇಂದ್ರ ಸಚಿವ ಸಂಪುಟ ಪುನಾರಚನೆಗೆ ಮುಹೂರ್ತ ನಿಗದಿಯಾಗಿದೆ. ಜುಲೈ 8ರಂದು ಸಂಪುಟ ಪುನಾರಚನೆ ನಡೆಯಲಿದೆ.
ಗುರುವಾರ ಬೆಳಿಗ್ಗೆ 10:30ಕ್ಕೆ ಕೇಂದ್ರ ಸಂಪುಟ ಪುನಾರಚನೆ ನಡೆಯಲಿದ್ದು, ಕೆಲ ಹಿರಿಯ ನಾಯಕರಿಗೆ ಕೊಕ್ ಕೊಟ್ಟು ಹೊಸ ಮುಖಗಳಿಗೆ ಸ್ಥಾನ ನೀಡಲು ಪ್ರಧಾನಿ ಮೋದಿ ಚಿಂತನೆ ನಡೆಸಿದ್ದಾರೆ.
ವಿವಿಧ ರಾಜ್ಯಗಳ ವಿಧಾನಸಭೆ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು 20ಕ್ಕೂ ಹೆಚ್ಚು ಯುವ ನಾಯಕರಿಗೆ ಕೇಂದ್ರ ಕ್ಯಾಬಿನೇಟ್ ನಲ್ಲಿ ಆದ್ಯತೆ ನೀಡುವ ಬಗ್ಗೆ ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸಂಪುಟ ಪುನಾರಚನೆ ವಿಚಾರವಾಗಿ ಇಂದು ಕೇಂದ್ರ ನಾಯಕರ ಸಭೆ ಕರೆಯಲಾಗಿತ್ತು. ಆದರೆ ಸಭೆಯನ್ನು ರದ್ದುಗೊಳಿಸಿ, ಇನ್ನೆರಡು ದಿನಗಳಲ್ಲೇ ಸಂಪುಟ ಪುನಾರಚನೆಗೆ ದಿನಾಂಕ ನಿಗದಿ ಮಾಡಿ, ಸಮಯ ಘೋಷಿಸಿರುವುದು ತೀವ್ರ ಕುತೂಹಲ ಮೂಡಿಸಿದೆ.

Latest Indian news

Popular Stories

error: Content is protected !!