ಉಡುಪಿ ಜಿಲ್ಲೆ ಸ್ಥಾಪನೆಯಾಗಿ 25 ವರ್ಷ; ರಜತ ಮಹೋತ್ಸವದ ವಿಜೃಂಭಣೆಯ ಆಚರಣೆ: ಕೆ.ಜಯಪ್ರಕಾಶ್ ಹೆಗ್ಡೆ

ಉಡುಪಿ: ಉಡುಪಿ ಜಿಲ್ಲೆಯ ಅಸ್ಥಿತ್ವಕ್ಕೆ ಬಂದು ಇದೇ ಆಗಸ್ಟ್ 25ಕ್ಕೆ, 25 ವರ್ಷಗಳು ಪೂರ್ಣಗೊಳ್ಳುತ್ತಿದ್ದು, ಜಿಲ್ಲೆಯು ಸಾಗಿ ಬಂದಅಭಿವೃದ್ಧಿ ಕಾರ್ಯಗಳ ಪುನಾರವಲೋಕನದ ರಜತ ಮಹೋತ್ಸವದ ಕಾರ್ಯಕ್ರಮವನ್ನು ಅತ್ಯಂತ ವಿಜೃಂಭಣೆಯಿಂದ ಹಮ್ಮಿಕೊಳ್ಳಲಾಗುವುದು ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ಹೇಳಿದರು.


ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ,ರಜತ ಮಹೋತ್ಸವ ಕಾರ್ಯಕ್ರಮದ ಪೂರ್ವಬಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ಉಡುಪಿ ಜಿಲ್ಲೆಯಎಲ್ಲಾ ತಾಲೂಕುಗಳು ಈ ಹಿಂದೆ ದಕ್ಷಿಣ ಕನ್ನಡಜಿಲ್ಲೆಯ ಅವಿಭಾಜ್ಯ ಅಂಗವಾಗಿದ್ದು,ಜನರುತಮ್ಮ ಕೆಲಸ ಕಾರ್ಯಗಳಿಗೆ ದೂರದ ಜಿಲ್ಲಾ ಕೇಂದ್ರವಾದ ಮಂಗಳೂರಿಗೆ ಹೋಗಿ ಬರುವುದು ಕಷ್ಟದ ಕೆಲಸವಾಗಿತ್ತು. ಉಡುಪಿ ಜಿಲ್ಲೆಯನ್ನು ರಚಿಸಬೇಕೆಂಬ ಜನರ ಆಶೋತ್ತರ ಹಾಗೂ ಜನಪ್ರತಿನಿಧಿಗಳ ಪ್ರಯತ್ನ ,ಸಂಘ ಸಂಸ್ಥೆಗಳ ಹೋರಾಟದ ಫಲವಾಗಿ ಅಂದಿನ ಮುಖ್ಯಮಂತ್ರಿಗಳಾದ ಜೆ,ಹೆಚ್.ಪಟೇಲ್‌ಅವರು 1997 ರ ಆಗಸ್ಟ್ 25 ರಂದು ಉಡುಪಿ ಜಿಲ್ಲೆಗೆ ಚಾಲನೆ ನೀಡುವ ಮೂಲಕ ಜಿಲ್ಲೆಅಸ್ಥಿತ್ವಕ್ಕೆ ಬಂದಿತುಎಂದರು.


ಜಿಲ್ಲೆಯು ರಚನೆಗೆ ಮೊದಲು ಅಭಿವೃದ್ದಿಯ ಕಾರ್ಯಗಳು ಅಮೆಗತಿಯಲ್ಲಿದ್ದು, ನಂತರದ ದಿನಗಳಲ್ಲಿ ಅಭಿವೃದ್ಧಿಯ ಪರ್ವದತ್ತ ಸಾಗಿ ರಾಜ್ಯದ ಇತರೇ ಜಿಲ್ಲೆಗಳಿಗಿಂತಲೂ ಹೆಚ್ಚಿನಅಭಿವೃಧಿ ಕಾರ್ಯಗಳು ಆಗಿವೆ. ಇವು ಕೇವಲ ಸರ್ಕಾರದ ಕಾರ್ಯಗಳಲ್ಲದೇ ಖಾಸಗಿ ಸೇರಿದಂತೆ ಇತರೇ ಎಲ್ಲಾ ಕ್ಷೇತ್ರದಲ್ಲಿಯೂ ಸಹ ಅಭಿವೃದ್ದಿಯತ್ತ ಸಾಗಿ ಮುನ್ನಡೆಯುತ್ತಿದೆ ಎಂದರು.


ರಜತ ಮಹೋತ್ಸವ ಕಾರ್ಯಕ್ರಮವನ್ನು ಹಿಂದಿನ ದಿನಗಳ ನೆನಪಿನೊಂದಿಗೆ ಮುಂದೆ ಹೋಗಬೇಕೆಂಬ ಕಲ್ಪನೆಯೊಂದಿಗೆ, ಇದೇ ಆಗಸ್ಟ್ 25 ರಿಂದ2023 ರ ಜನವರಿ ವರೆಗೆಜಿಲ್ಲಾ ಹಾಗೂ ತಾಲೂಕು ಮಟ್ಟಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.


ಶಾಸಕ ರಘುಪತಿ ಭಟ್ ಮಾತನಾಡಿ, ರಜತ ಮಹೋತ್ಸವ ಕಾರ್ಯಕ್ರಮವನ್ನು ಜಿಲ್ಲೆಯ ಜನರ ಸಹಭಾಗಿತ್ವದಲ್ಲಿ ನಡೆಯಬೇಕು , ಅಂದಿನ ಜನಪ್ರತಿನಿಧಿಗಳು, ಸಂಘ ಸಂಸ್ಥೆಯಪ್ರತಿನಿಧಿಗಳನ್ನು ಸನ್ಮಾನಿಸಬೇಕು,ಅಜ್ಜರಕಾಡುಜಿಲ್ಲಾಕ್ರೀಡಾಂಗಣದಲ್ಲಿ ನಡೆಯುವಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಬೇಕೆಂದು ಸಲಹೆ ನೀಡಿದರು.


ಜಿಲ್ಲಾಧಿಕಾರಿಕೂರ್ಮಾರಾವ್ ಎಂ ಮಾತನಾಡಿ, ರಜತ ಮಹೋತ್ಸವ ಅಂಗವಾಗಿ ನಡೆಯಲಿರುವ ಎಲ್ಲಾ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿಆಯೋಜಿಸಬೇಕು.ಅದಕ್ಕೆಅಗತ್ಯವಿರುವ ಎಲ್ಲಾ ರೀತಿಯ ಪೂರ್ವ ಸಿದ್ದತೆಗಳನ್ನು ಮಾಡಿಕೊಳ್ಳುವುದರೊಂದಿಗೆ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ತಿಳಿಸಿದರು.


ಕಾರ್ಯಕ್ರಮದ ಸಿದ್ದತೆಗೆ ವಿವಿಧ ಉಪ ಸಮಿತಿಗಳನ್ನು ರಚಿಸಲಾಯಿತು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್.,ಅಪರ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಲಿಂಗಪ್ಪ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಪೆಡ್ನೇಕರ್ ಹಾಗೂ ವಿವಿಧ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.

Latest Indian news

Popular Stories

Social Media Auto Publish Powered By : XYZScripts.com
error: Content is protected !!