ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ನಾಲ್ವರು ಮೃತ್ಯು

ವಿಜಯಪುರ: ಕೆಟ್ಟು ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಕಾರಿನಲ್ಲಿ ಒಂದೇ ಕುಟುಂಬದ ಮೂವರು ಹಾಗೂ ಲಾರಿ ಚಾಲಕ ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಭವಿಸಿದೆ.

ವಿಜಯಪುರ ಜಿಲ್ಲೆ ಬಬಲೇಶ್ವರ ತಾಲೂಕಿನ ಹೊನಗನಹಳ್ಳಿ ಗ್ರಾಮದ ಬಳಿ ಎನ್.ಎಚ್-50 ರಲ್ಲಿ ಈ ದುರ್ಘಟನೆ ಸಂಭವಿಸಿದೆ.

ಲಾರಿ ಕೆಟ್ಟುನಿಂತ ಕಾರಣ ಚಾಲಕ ದುರಸ್ತಿ ಕೆಲಸದಲ್ಲಿ ನಿರತನಾಗಿದ್ದ. ಈ ಹಂತದ ಈ ಮಾರ್ಗವಾಗಿ ಬಂದ ಕಾರು ಲಾರಿಗೆ ಡಿಕ್ಕಿ ಹೊಡೆದಿದೆ. ಲಾರಿ ದುರಸ್ಥಿಯಲ್ಲಿ ನಿರತನಾಗಿದ್ದ ಚಾಲಕ ಹಾಗೂ ಕಾರಿನಲ್ಲಿದ್ದ ವಿಜಯಪುರ ನಗರದ ಮೂಲದ ಓರ್ವ ಪುರುಷ ಓರ್ವ ಮಹಿಳೆ ಹಾಗೂ ಒಂದು ಮಗು ಸ್ಥಳದಲ್ಲಿ ಮೃತಪಟ್ಟಿದ್ದಾರೆ.

ಕಾರಿನಲ್ಲಿದ್ದ ಇತರೆ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೃತರ ಹೆಸರು ಇನ್ನೂ ತಿಳಿದು ಬಂದಿಲ್ಲ.

ವಿಜಯಪುರ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ.

Latest Indian news

Popular Stories

error: Content is protected !!