ಬಟ್ಟೆಗೇರಿ ಗ್ರಾಮ ಪಂಚಾಯತಿನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಚಳ್ಳೆಯಂಡ ಕಮಲ ಉತ್ತಯ್ಯ ಚುನಾಯಿತರಾಗಿದ್ದಾರೆ. ಒಟ್ಟು 15 ಸದಸ್ಯರ ಬಲ ಹೊಂದಿರುವ ಈ ಪಂಚಾಯಿತಿಯಲ್ಲಿ ಬಿಜೆಪಿ ಬೆಂಬಲಿತ ಸದಸ್ಯರು ಸಂಖ್ಯೆ ಒಟ್ಟು 12 ಹಾಗೂ ಕಾಂಗ್ರೆಸ್ ಬೆಂಬಲಿತ ಸದಸ್ಯರ ಸಂಖ್ಯೆ 3 ಆದರೆ ಇಂದು ಚುನಾವಣೆ ನಡೆದ ಸಂದರ್ಭ ಕಾಂಗ್ರೆಸ್ ಅಧ್ಯಕ್ಷರ ಅಭ್ಯರ್ಥಿಗೆ 9 ಮತಗಳು ದೊರಕಿದರೆ, ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ 6 ಮತಗಳು ದೊರಕಿದೆ .ಉಪಾಧ್ಯಕ್ಷರಾಗಿ ದೇವಯ್ಯ ಅವರು ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಕೆಪಿಸಿಸಿ ಸದಸ್ಯರಾದ ನಂದಕುಮಾರ್, ಅಲ್ಪಸಂಖ್ಯಾತರ ಘಟಕದ ಬ್ಲಾಕ್ ಅಧ್ಯಕ್ಷರಾದ ಇಸ್ಮಾಯಿಲ್, ಹಿಂದುಳಿದ ವರ್ಗದ ಜಿಲ್ಲಾಧ್ಯಕ್ಷರಾದ ಬಾನಂಡ ಪೃಥ್ವಿ, ತೀರ್ಥ ಪೂವಯ್ಯ ಹಾಗು ಪಕ್ಷದ ಕಾರ್ಯಕರ್ತರು ಹಾಜರಿದ್ದು ಅಧ್ಯಕ್ಷರು ಹಾಗೂ ಉಪಾಧ್ಯಕ್ಷರನ್ನು ಅಭಿನಂದಿಸಿದ್ದಾರೆ.