ಕಾಲೇಜಿನಲ್ಲಿ ಡಾನ್ಸ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿನಿ ಮೃತ್ಯು

ಮೈಸೂರು: ವಿದ್ಯಾರ್ಥಿನಿಯೊಬ್ಬಳು ಕಾಲೇಜಿನಲ್ಲಿ ಡಾನ್ಸ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವೇಳೆ ಪ್ರಜ್ಞೆ ತಪ್ಪಿ ಬಿದ್ದು ಮೃತಪಟ್ಟಿದ್ದಾರೆ. ಟಿ. ನರಸೀಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕಾಲೇಜೊಂದರಲ್ಲಿ ಈ ಘಟನೆ ನಡೆದಿದೆ.

ಮೃತಪಟ್ಟ ವಿದ್ಯಾರ್ಥಿನಿಯನ್ನು ನಮಿತಾ ಎಂದು ಗುರುತಿಸಲಾಗಿದೆ. ನಮಿತಾ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಎಂದು ತಿಳಿದು ಬಂದಿದೆ.

ನಿಗೂಢ ಸಾವಿಗೆ ಕಾರಣ ತಿಳಿದುಬಂದಿಲ್ಲ. ಪ್ರಜ್ಞೆ ತಪ್ಪಿ ಬಿದ್ದ ನಮಿತಾ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೂ ಫಲಕಾರಿಯಾಗಲಿಲ್ಲ. ಟಿ ನರಸೀಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ

Latest Indian news

Popular Stories