ಕುವೈತ್ ದೇಶಕ್ಕೆ ಕೆಲಸಕ್ಕೆಂದು ಕರೆದುಕೊಂಡು ಹೋಗಿ ಮಹಿಳೆಗೆ ವಂಚನೆ – ರಕ್ಷಣೆ

ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕರಡಿಗೋಡು ನಿವಾಸಿಯಾದ ಪಾರ್ವತಿ ಎಂಬ ಮಹಿಳೆ ಕುವೈತ್ ದೇಶಕ್ಕೆ ಕೆಲಸಕ್ಕೆಂದು ಏಜೆಂಟ್ ಮುಖಾಂತರ ತೆರಳಿದ್ದರು. ಈ ವೇಳೆ ಅವರನ್ನು ಅಲ್ಲಿಯ ಏಜೆಂಟ್ ಕೂಡಿ ಹಾಕಿದ್ದರು. ಕೊಡಗು ಜಿಲ್ಲಾಡಳಿತಕ್ಕೆ ಈ ಬಗ್ಗೆ ದೂರು‌ ಸ್ವೀಕೃತವಾದವಾದ ಕೂಡಲೇ ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರಾದ ಆರ್.ಎಂ.ಅನನ್ಯ ವಾಸುದೇವ್ ಅವರಿಗೆ , ಸಂತ್ರಸ್ತ ಮಹಿಳೆಯನ್ನು ಕ್ಷೇಮವಾಗಿ‌ ಕರೆ ತರುವ ಜವಾಬ್ದಾರಿ ವಹಿಸಿದ್ದರು.

ಜಿಲ್ಲಾಡಳಿತ ಸಂತ್ರಸ್ತ ಮಹಿಳೆಯೊಂದಿಗೆ ಸಂಪರ್ಕ ಸಾಧಿಸಿ, ಅವರಿದ್ದ ಸ್ಥಳವನ್ನು ಗುರುತಿಸಿ ಕುವೈತ್ ಅಲ್ಲಿರುವ ಭಾರತೀಯ ರಾಯಭಾರ ಕಚೇರಿ ಹಾಗೂ ವಿದೇಶಾಂಗ ಸಚಿವಾಲಯಕ್ಕೆ ಮಾಹಿತಿ‌ ನೀಡಿತ್ತು. ನಿರಂತರ ಸಂಪರ್ಕವನ್ನು ಸಾಧಿಸಿ ಸತತ ಪ್ರಯತ್ನದ ಮೂಲಕ ಭಾರತೀಯ ರಾಯಭಾರ ಕಚೇರಿಯ ಸಹಯೋಗದೊಂದಿಗೆ ಕೊಡಗು‌ ಜಿಲ್ಲಾಡಳಿತ ಸಂತ್ರಸ್ತ ಮಹಿಳೆಯನ್ನು ಕ್ಷೇಮವಾಗಿ‌ ಭಾರತಕ್ಕೆ‌ ಕರೆ ತರುವಲ್ಲಿ ಯಶಸ್ವಿಯಾಗಿದೆ. ಇಂದು‌ ಬೆಳಿಗ್ಗೆ ಸಂತ್ರಸ್ತ ‌ಮಹಿಳೆ ೯:೧೦ ನಿಮಿಷಕ್ಕೆ ಚೆನ್ನೈ ಗೆ ತಲುಪಿದ್ದಾರೆ. ಅಲ್ಲಿಂದ ಕೊಡಗಿಗೆ ಬರುತ್ತಿದ್ದಾರೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ‌ ತಿಳಿಸಿದೆ.

Latest Indian news

Popular Stories