ಕೊಡಗು ಜಿಲ್ಲೆಯಲ್ಲಿ ಇಬ್ಬರನ್ನು ಬಲಿ ಪಡೆದಿದ್ದ ನರಭಕ್ಷಕ ‘ಹುಲಿ’ ಸೆರೆ

ಕೊಡಗು : ಕೊಡಗು ಜಿಲ್ಲೆಯಲ್ಲಿ ಇಬ್ಬರನ್ನು ಬಲಿ ಪಡೆದಿದ್ದ ನರಭಕ್ಷಕ ಹುಲಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ.

ಕೊಡಗು ಜಿಲ್ಲೆಯ ಪೊನ್ನಂಪೇಟೆ ನಾಣಚ್ಚಿಗೇಟ್ ಬಳಿ ಅರವಳಿಕೆ ಚುಚ್ಚುಮದ್ದು ನೀಡಿ ನರಭಕ್ಷಕ ಹುಲಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ.

ಬೆಳಗ್ಗೆಯಿಂದ ಕಾರ್ಯಾಚರಣೆ ನಡೆಸಿದ್ದ ಅರಣ್ಯ ಇಲಾಖೆ ಸಿಬ್ಬಂದಿ ದಸರಾ ಆನೆ ಅಭಿಮನ್ಯು ನೇತೃತ್ವದಲ್ಲಿ ಇಂದು ಸಾಕಾನೆಗಳನ್ನು ಬಳಸಿಕೊಂಡು ಕಾರ್ಯಾಚರಣೆ ನಡೆಸಿ ಹುಲಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಹಿಡಿದಿದ್ದಾರೆ.

ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ನಾಗರಹೊಳೆ ಗಡಿಯಲ್ಲಿರುವ ಕೆ.ಬಾಡಗ ಗ್ರಾಮದಲ್ಲಿ ಹುಲಿ ದಾಳಿಗೆ ಇಬ್ಬರು ಬಲಿಯಾದ ಪ್ರಕರಣ ಸಂಬಂಧಿಸಿದಂತೆ ಹುಲ್ಲಿ ಕೊಲ್ಲುವಂತೆ ಆಗ್ರಹಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರು. ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರು ಹಾಗೂ ರೈತಸಂಘದಿಂದ ಮುತ್ತಿಗೆ ಹಾಕಿ ಹುಲಿ ಕೊಲ್ಲಲು ಆದೇಶ ತರುವಂತೆ ಆಗ್ರಹಿಸಿದ್ದರು. .ಫೆಬ್ರವರಿ 12ರಂದು ಪೊನ್ನಂಪೇಟೆ ತಾಲ್ಲೂಕಿನ ಕುಟ್ಟ ಗ್ರಾಮದಲ್ಲಿ 12 ವರ್ಷದ ಬಾಲಕ ಚೇತನ್ ಮೇಲೆ ದಾಳಿ ನಡೆಸಿದ್ದ ವ್ಯಾಘ್ರ ಆತನನ್ನು ಕೊಂದು ಹಾಕಿತ್ತು. ದಾಳಿ ಮಾಡಿದ ಹುಲಿ ಬಾಲಕನನ್ನು ಕೊಂದು ತೊಡೆ ಭಾಗವನ್ನು ತಿಂದಿದೆ ಎನ್ನಲಾಗಿತ್ತು.

ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದರು. ಈ ಘಟನೆ ಕುಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು.ಈ ಘಟನೆ ಜನರ ಮನಸ್ಸಿನಲ್ಲೇ ಇದ್ದಾಗಲೇ ಅಂದರೆ ಘಟನೆಯಾಗಿ ಕೆಲವೇ ಗಂಟೆಗಳಲ್ಲಿ ಪೊನ್ನಂಪೇಟೆ ತಾಲೂಕಿನ ನಾಲ್ಕೇರಿ ಗ್ರಾಮದ ಬಳಿ ನಡೆದ ಹುಲಿ ದಾಳಿಯಲ್ಲಿ ಮೈಸೂರು ಜಿಲ್ಲೆಯ ಕೊಳವಿಗೆ ಹಾಡಿ ನಿವಾಸಿ ರಾಜು ಸಾವನ್ನಪ್ಪಿದ್ದರು. 24 ಗಂಟೆಗಳಲ್ಲಿ ಹುಲಿ ದಾಳಿಗೆ ಇಬ್ಬರು ಬಲಿ ಆಗಿದ್ದರು.

Latest Indian news

Popular Stories