ಜ.3 ರಂದು ಕೊಡಗು ಜಿಲ್ಲಾ ಮಟ್ಟದ ಮಕ್ಕಳ ವಿಜ್ಞಾನ ಸಮಾವೇಶ

ಮಡಿಕೇರಿ ಜ.02:-ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಂವಹನ ಮಂಡಳಿ(ಎನ್‍ಸಿಎಸ್‍ಟಿಸಿ), ರಾಜ್ಯ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಪೆÇ್ರೀತ್ಸಾಹಕ ಸೊಸೈಟಿ(ಕೆ-ಸ್ಟೆಪ್ಸ್), ಜಿಲ್ಲಾಡಳಿತ, ಕೊಡಗು ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಮಿತಿ ಹಾಗೂ ಮಡಿಕೇರಿ ನಗರದ ಎ.ಎಲ್.ಜಿ.ಕ್ರೆಸೆಂಟ್ ಶಾಲೆಯ ಸಂಯುಕ್ತ ಆಶ್ರಯದಲ್ಲಿ “ಯೋಗಕ್ಷೇಮಕ್ಕಾಗಿ ಜೀವಿ ಪರಿಸರ ವ್ಯವಸ್ಥೆಯನ್ನು ಅರ್ಥ ಮಾಡಿಕೊಳ್ಳೋಣ” ಎಂಬ ಕೇಂದ್ರ ವಿಷಯದಡಿ ಕೊಡಗು ಜಿಲ್ಲಾ ಮಟ್ಟದ 30 ನೇ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶವು ಜನವರಿ, 3 ರಂದು ಬೆಳಗ್ಗೆ 10 ಗಂಟೆಗೆ ನಗರದ ಎಎಲ್‍ಜಿ ಕ್ರೆಸೆಂಟ್ ಶಾಲೆಯಲ್ಲಿ ನಡೆಯಲಿದೆ.


ಜಿಲ್ಲಾಧಿಕಾರಿ ಡಾ ಬಿ.ಸಿ.ಸತೀಶ ಸಮ್ಮೇಳನ ಉದ್ಘಾಟಿಸಲಿದ್ದು, ಎಎಲ್‍ಜಿ ಕ್ರೆಸೆಂಟ್ ಶಾಲೆಯ ಕಾರ್ಯದರ್ಶಿ ಜಿ.ಎಚ್. ಮಹಮ್ಮದ್ ಹನೀಫ್ ಅಧ್ಯಕ್ಷತೆ ವಹಿಸಲಿದ್ದಾರೆ. ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿ ಅಧ್ಯಕ್ಷ ಟಿ.ಜಿ.ಪ್ರೇಮಕುಮಾರ್ ಸಮಾವೇಶದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಲಿದ್ದು, ಡಿಡಿಪಿಐ ಸಿ.ರಂಗಧಾಮಯ್ಯ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮ್ಯಾಥ್ಯೂ, ರೋಟರಿ ಕ್ಲಬ್‍ನ ಪಬ್ಲಿಕ್ ಇಮೇಜ್ ಸಮಿತಿ ಅಧ್ಯಕ್ಷ ಅನಿಲ್ ಎಚ್.ಟಿ. ಜಿಲ್ಲಾ ಪರಿಸರ ಅಧಿಕಾರಿ ರಘುರಾಮ್, ಬಿಇಒ ಎಚ್.ಟಿ.ಮಂಜುನಾಥ್ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ಸಮಾವೇಶದ ಜಿಲ್ಲಾ ಸಂಯೋಜಕ ಜಿ.ಶ್ರೀಹರ್ಷ ಅವರು ತಿಳಿಸಿದ್ದಾರೆ.
ಮಧ್ಯಾಹ್ನ 3 ಗಂಟೆಗೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಜಿ.ಪಂ.ಸಿಇಒ ಡಾ.ಎಸ್.ಆಕಾಶ್ ಕಿರಿಯ ವಿಜ್ಞಾನಿಗಳಿಗೆ ಪ್ರಶಸ್ತಿ ಪತ್ರ ವಿತರಿಸಲಿದ್ದಾರೆ. ಉಪ ವಿಭಾಗಾಧಿಕಾರಿ ಡಾ.ಯತೀಶ್ ಉಳ್ಳಾಲ್, ಕೂಡಿಗೆ ಡಯಟ್ ಪ್ರಾಂಶುಪಾಲ ಬಿ.ವಿ.ಮಲ್ಲೇಶಪ್ಪ, ಜಿಲ್ಲಾ ಕ.ಸಾ.ಪ.ಅಧ್ಯಕ್ಷ ಎಂ.ಪಿ.ಕೇಶವಕಾಮತ್ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.


“ಯೋಗಕ್ಷೇಮಕ್ಕಾಗಿ ಜೀವಿ ಪರಿಸರ ವ್ಯವಸ್ಥೆಯನ್ನು ಅರ್ಥ ಮಾಡಿಕೊಳ್ಳೋಣ” ಕೇಂದ್ರ ವಿಷಯದಡಿ ವಿವಿಧ 5 ಉಪ ವಿಷಯಗಳ ಕುರಿತು ವಿದ್ಯಾರ್ಥಿಗಳು ಮಾರ್ಗದರ್ಶಿ ಶಿಕ್ಷಕರ ಮಾರ್ಗದರ್ಶನದಡಿ ತಮ್ಮ ಸುತ್ತಲಿನ ಪರಿಸರದ ಸಮಸ್ಯೆಯನ್ನು ಗುರುತಿಸಿ ಸರ್ವೆ ಕಾರ್ಯ ನಡೆಸಿ ತಜ್ಞರ ಅಭಿಪ್ರಾಯ ಪಡೆದು ವಿಶ್ಲೇಷಿಸಿ, ಸಂಶೋಧಿಸಿ ಸೂಕ್ತ ಪರಿಹಾರ ಕಂಡುಕೊಂಡು ಒಂದು ಉತ್ತಮ ವೈಜ್ಞಾನಿಕ ಯೋಜನಾ ಪ್ರಬಂಧ ಮಂಡಿಸುವ ಮೂಲಕ ಮಕ್ಕಳು ವಿಜ್ಞಾನ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ವಿಜ್ಞಾನ ಕಾರ್ಯಕ್ರಮದ ನೋಡಲ್ ಅಧಿಕಾರಿ ಟಿ.ಜಿ.ಪ್ರೇಮಕುಮಾರ್ ತಿಳಿಸಿದ್ದಾರೆ.


ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶವು ಭವಿಷ್ಯದ ವಿಜ್ಞಾನಿಗಳನ್ನಾಗಿ ರೂಪಿಸಲು ಸಹಕಾರಿಯಾಗಿದೆ ಎಂದು ತಿಳಿಸಿದ್ದಾರೆ. ಜಿಲ್ಲಾ ಮಟ್ಟದ ಸಮಾವೇಶದಲ್ಲಿ ಉತ್ತಮವಾಗಿ ವೈಜ್ಞಾನಿಕ ಯೋಜನಾ ಪ್ರಬಂಧ ಮಂಡಿಸುವ 10 ತಂಡಗಳು ರಾಜ್ಯ ಮಟ್ಟದ ಮಕ್ಕಳ ವಿಜ್ಞಾನ ಸಮಾವೇಶಕ್ಕೆ ಆಯ್ಕೆಯಾಗಲಿವೆ ಎಂದು ಸಮಾವೇಶದ ಜಿಲ್ಲಾ ಸಂಯೋಜಕ ಜಿ.ಶ್ರೀಹರ್ಷ ತಿಳಿಸಿದ್ದಾರೆ.

Latest Indian news

Popular Stories