ಕೊಡಗು ಜಿಲ್ಲೆಯ ಅರಣ್ಯ ಇಲಾಖೆಯ ಸಮಸ್ಯೆಯ ಬಗ್ಗೆ ಮತ್ತು ಅನೆ ಮಾನವ ಸಂಘರ್ಷದ ಬಗ್ಗೆ ಚರ್ಚಿಸುವ ಉದ್ದೇಶದಿಂದ ಆಗಮಿಸಿರುವ ಅರಣ್ಯ ಸಚಿವರಾದ ಈಶ್ವರ ಖಂಡ್ರೆ ಅವರನ್ನು ನಾಗರಹೊಳೆಯಲ್ಲಿ ಶಾಸಕರಾದ ಎ. ಎಸ್ ಪೊನ್ನಣ್ಣ, ಕೆಪಿಸಿಸಿ ರಾಜ್ಯ ವಕ್ತಾರ ಸಂಕೇತ್ ಪೊವಯ್ಯ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜಾ ಉತ್ತಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ, ನವೀನ್, ಪಕ್ಷದ ಮುಖಂಡರು ಹಾಗೂ ಜಿಲ್ಲಾಡಳಿತದ ವಿವಿಧ ಅಧಿಕಾರಿಗಳು ಬರಮಾಡಿಕೊಂಡರು.
ಶಾಸಕರಾದ ಎ ಎಸ್ ಪೊನ್ನಣ್ಣನವರ ಕೋರಿಕೆಯ ಮೇರೆಗೆ ಮಾನವ ಹಾಗೂ ವನ್ಯಜೀವಿಗಳ ನಡುವೆ ನಡೆಯುತ್ತಿರುವ ಸಂಘರ್ಷಕ್ಕೆ ಮುಕ್ತಿ ಕಾಣಿಸುವ ದೃಷ್ಟಿಯಿಂದ ಮತ್ತು ಜನಸಾಮಾನ್ಯರಿಗೆ ಅರಣ್ಯ ಇಲಾಖೆಯ ಮೂಲಕ ಆಗುತ್ತಿರುವ ತೊಂದರೆ ಮತ್ತು ಸರ್ಕಾರದ ಅಭಿವೃದ್ಧಿ ಕಾರ್ಯಗಳಿಗೆ ಅರಣ್ಯ ಇಲಾಖೆಯಿಂದ ತಡೆ ಇವೆಲ್ಲದರ ಬಗ್ಗೆ ಚರ್ಚಿಸಲು ಸಚಿವರನ್ನು ಜಿಲ್ಲೆಗೆ ಬರಮಾಡಿಕೊಳ್ಳಲಾಗಿದೆ.