ಮಡಿಕೇರಿ: ಕೊಡಗು ಪ್ರೆಸ್ ಕ್ಲಬ್ ಬೆಳ್ಳಿಹಬ್ಬ ಸಂಭ್ರಮ ಹಿನ್ನೆಲೆಯಲ್ಲಿ ಆಯೋಜಿಸಲಾಗಿರುವ ಕೊಡಗು ಪ್ರೆಸ್ ಕ್ಲಬ್ ಕ್ರಿಕೆಟ್ ಪ್ರಿಮಿಯರ್ ಲೀಗ್- 3 ರ ಉದ್ಘಾಟನಾ ಸಮಾರಂಭ ಜ. 22ರಂದು ನಡೆಯಲಿದೆ.
ಮಡಿಕೇರಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ಬೆಳಗ್ಗೆ 11.30ಕ್ಕೆ ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಅಧ್ಯಕ್ಷತೆಯಲ್ಲಿ ಆಯೋಜಿಸಿರುವ ಸಮಾರಂಭವನ್ನು ಸರ್ಕಾರಿ ಜಮೀನು ಸಂರಕ್ಷಣಾ ಸಮಿತಿ ಅಧ್ಯಕ್ಷರೂ ಆಗಿರುವ ವಿರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ ಉದ್ಘಾಟಿಸಲಿದ್ದಾರೆ. ಕ್ರಿಕೆಟ್ ಪಂದ್ಯ ಉದ್ಘಾಟನೆಯನ್ನು ಒಕ್ಕಲಿಗರ ಸಂಘದ ಕಾರ್ಯಾಧ್ಯಕ್ಷ ಹರಪಳ್ಳಿ ರವೀಂದ್ರ ನೆರವೇರಿಸಲಿದ್ದಾರೆ.
ಮುಳಿಯ ಜ್ಯುವೆಲ್ಸ್ ಚೇರ್ಮನ್, ಮೇನೆಂಜಿಗ್ ಡೈರೆಕ್ಟರ್ ಕೇಶವ ಪ್ರಸಾದ್ ಮುಳಿಯ, ನಂದಿಗುAದದ ದೇವ್‌ಗ್ರೂಪ್ ವ್ಯವಸ್ಥಾಪಕ ನಿರ್ದೇಶಕ ಚಾಮೇರ ಪವನ್ ದೇವಯ್ಯ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ಅಂದೇ ಸಂಜೆ 6 ಗಂಟೆಗೆ ಮಡಿಕೇರಿ ಪತ್ರಿಕಾ ಭವನದಲ್ಲಿ ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಸಮಿತಿ ಅಧ್ಯಕ್ಷ ಡಾ.ಉಳ್ಳಿಯಡ ಎಂ. ಪೂವಯ್ಯ ಅಧ್ಯಕ್ಷತೆಯಲ್ಲಿ ಬಹುಮಾನ ವಿತರಣಾ ಸಮಾರಂಭ ನಡೆಯಲಿದೆ. ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಸಮಿತಿ ಮಹಾಪೋಷಕ ಜಿ. ರಾಜೇಂದ್ರ ಮತ್ತು ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೆ ಬಿ.ಆರ್. ಸವಿತಾ ರೈ ಬಹುಮಾನ ವಿತರಿಸಲಿದ್ದಾರೆ.
ಮುಳಿಯ ಜ್ಯುವೆಲ್ಸ್ ಮಡಿಕೇರ ಶಾಖಾ ವ್ಯವಸ್ಥಾಪಕ ತೀತಿಮಾಡ ಸೋಮಣ್ಣ, ಕೊಡಗು ಪ್ರೆಸ್ ಕ್ಲಬ್ ಖಜಾಂಚಿ ಬೊಳ್ಳಜೀರ ಬಿ. ಅಯ್ಯಪ್ಪ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ಕೊಡಗು ಪ್ರೆಸ್‌ಕ್ಲಬ್ ಪ್ರಧಾನ ಕಾರ್ಯದರ್ಶಿ ಕೆ.ಕೆ. ರೆಜಿತ್ ಕುಮಾರ್ ಮತ್ತು ಕೊಡಗು ಪ್ರೆಸ್ ಕ್ಲಬ್ ಕ್ರಿಕೆಟ್ ಪ್ರಿಮಿಯರ್ ಲೀಗ್- 3 ಸಂಚಾಲಕ ನವೀನ್ ಡಿಸೋಜ ನವೀನ್ ಡಿಸೋಜಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.