ಆಸ್ತಿವಿವಾದ ಹಿನ್ನಲೆಯಲ್ಲಿ ಸ್ವಂತ ತಮ್ಮಂದಿರೇ ಅಣ್ಣನನ್ನು ಕೊಚ್ಚಿ ಕೊಲೆಗೈದ ಘಟನೆ ಮಡಿಕೇರಿ ತಾಲೂಕಿನ ಸಂಪಾಜೆ ಸಮೀಪದ ಚೆಂಬು ಗ್ರಾಮದಿಂದ ವರದಿಯಾಗಿದೆ. ಇಲ್ಲಿನ ಕುದ್ರೆಪಾಯ ನಿವಾಸಿ ಉಸ್ಮಾನ್ ಹತ್ಯೆಯಾದ ದುರ್ದೈವಿ.
ಸತ್ತಾರ್, ರಫೀಕ್, ಇಸುಬು,ಅಬ್ಬಾಸ್, ಉಸ್ಮಾನ್ ಮೊದಲಾದ ಅಣ್ಣತಮ್ಮಂದಿರ ಕೃಷಿ ಭೂಮಿ ಸುಮಾರು 50 ಎಕ್ರೆ ಜಾಗ ಕುದ್ರೆಪಾಯದಲ್ಲಿದ್ದು ಜಾಗದ ತಕರಾರಿನಿಂದಾಗಿ ವಿವಾದವೆದ್ದಿದ್ದು, ಸಹೋದರರು ಸೇರಿ ಉಸ್ಮಾನ್ ಎಂಬವರನ್ನು ಇಂದು ಚೂರಿಯಿಂದ ಇರಿದು ಕೊಂದಿರುವುದಾಗಿ ಮಾಹಿತಿ ಲಭಿಸಿದೆ.
ಉಸ್ಮಾನ್ ಕುದ್ರೆಪಾಯದಲ್ಲಿ ಭೂಮಿ ಹೊಂದಿದ್ದರು. ಅರಂತೋಡಿನಲ್ಲೂ ಇವರಿಗೆ ಜಾಗವಿದೆ ಎಂದು ತಿಳಿದು ಬಂದಿದೆ. ಸದ್ಯ ಇವರು ಪುತ್ತೂರಿನ ಸಂಪ್ಯದಲ್ಲಿ ನೆಲೆಸಿದ್ದರು ಎನ್ನಲಾಗುತ್ತಿದೆ. ಕೊಡಗು ಸಂಪಾಜೆ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ