ದ್ವಿಚಕ್ರ ವಾಹನಗಳ ಮುಖ ಮುಖಿ ಡಿಕ್ಕಿ :ಕೆನರಾ ಬ್ಯಾಂಕ್ ಉದ್ಯೋಗಿಯಾಗಿದ್ದ ಯುವತಿ ಮೃತ್ಯು


ವಿರಾಜಪೇಟೆ ಅಮ್ಮತ್ತಿ ರಸ್ತೆಯ ಸುಂಕದ ಕಟ್ಟೆಯ ಬಳಿ ದ್ವಿಚಕ್ರ ವಾಹನಗಳ ಮುಖ ಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಸವಾರರು ಗಂಭೀರ ಗಾಯಗೊಂಡಿದ್ದರು.

ವಿರಾಜಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಇಬ್ಬರೂ ಸವಾರ ರಿಗೂ ತಲೆ ಭಾಗಕ್ಕೆ ಗಂಭೀರವಾಗಿ ಗಾಯಗೊಂಡ ಹಿನ್ನೆಲೆಯಲ್ಲಿ ಮತ್ತು ಪ್ರಜ್ಞಾಹೀನ ಸ್ಥಿತಿಯಲ್ಲಿ ಇರುವ ಕಾರಣ ದ್ವಿಚಕ್ರ ವಾಹನ ಚಲಾನೆ ಮಾಡುತ್ತಿದ್ದ ಅಮ್ಮತ್ತಿ ಕೆನರಾ ಬ್ಯಾಂಕ್ ಉದ್ಯೋಗಿ ಅಮ್ರತ (24) ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ಕಳುಹಿಸಿ ಕೊಡಲಾಗಿತ್ತು. ಬೈಕ್ ಚಲಾಯಿಸುತ್ತಿದ್ದ ಬಿಳುಗುಂದ ಗ್ರಾಮದ ವಿಠ್ಠಲ (22)ಅವರನ್ನು ಮಂಗಳೂರಿನ ಆಸ್ಪತ್ರೆಗೆ ಕಳುಹಿಸಿ ಕೊಡಲಾಗಿತ್ತು. ವಿರಾಜಪೇಟೆ ನಗರ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿತ್ತು.


ದ್ವಿಚಕ್ರ ವಾಹನಗಳ ಅಪಘಾತದಲ್ಲಿ ಗಾಯಗೊಂಡಿದ್ದ ಯುವತಿ ಮೃತ್ಯು


ಗಂಭೀರವಾಗಿ ಗಾಯಗೊಂಡಿದ್ದ ಅಮ್ಮತ್ತಿ ಕೆನರಾ ಬ್ಯಾಂಕ್ ಉದ್ಯೋಗಿ ಮೂಲತಃ ಕೇರಳ ರಾಜ್ಯದ ತ್ರಿಶೂರ್ ಜಿಲ್ಲೆಯ ಅಮೃತ (24) ಅವರು ಚಿಕಿತ್ಸೆ ಫಲಕಾರಿಯಾಗದೆ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ.

ಕಳೆದ ಒಂದು ವರ್ಷದ ಹಿಂದೆ ಅಮ್ಮತ್ತಿ ಯ ಕೆನರಾ ಬ್ಯಾಂಕ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರು ವಿರಾಜಪೇಟೆ ನಗರದ ಖಾಸಗಿ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿದ್ದರು.

Latest Indian news

Popular Stories