ಕೋಟೆಬೆಟ್ಟದಲ್ಲಿ ಪ್ರವಾಸಿಗರ ಮೇಲೆ ಹಲ್ಲೆ : ಭಯಭೀತರಾದ ಮಹಿಳೆಯರು, ಮಕ್ಕಳು

ಕೊಡಗು ಜಿಲ್ಲೆಯ ಕೋಟೆಬೆಟ್ಟ ಪ್ರವಾಸಕ್ಕೆಂದು ಆಗಮಿಸಿದ ಪ್ರವಾಸಿಗರ ಮೇಲೆ ಬೈಕಿನಲ್ಲಿ ಬಂದ ಇಬ್ಬರು ಹಲ್ಲೆ ಮಾಡಿ ದೌರ್ಜನ್ಯ ಎಸಗಿರುವ ಘಟನೆ ನಡೆದಿದೆ.

ಮಕ್ಕಳು, ಮಹಿಳೆಯರು ಸೇರಿದಂತೆ ಪುತ್ತೂರಿನಿಂದ ಕುಟುಂಬ ಸಮೇತ ಕೋಟೆ ಬೆಟ್ಟ ಪ್ರವಾಸಿ ತಾಣಕ್ಕೆ ಆಗಮಿಸಿದ ಕುಟಂಬದ ಮೇಲೆ ಬೈಕಿನಲ್ಲಿ ಬಂದ ಇಬ್ಬರು ಪುಂಡರು ಹಲ್ಲೆ ನಡೆಸಿ, ಚಿನ್ನದ ಸರ ಎಗರಿಸಿ ಬೈಕನ್ನು ಬಿಟ್ಟು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಇಬ್ಬರು ಆರೋಪಿಗಳು ಮಾದಾಪುರ ಸಮೀಪದ ನಿವಾಸಿಗಳು ಎಂದು ಹೇಳಲಾಗಿದೆ.

ದೌರ್ಜನ್ಯಕ್ಕೆ ಒಳಗಾದವರು ಮಾದಾಪುರ ಉಪ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸೋಮವಾರಪೇಟೆ ಪೊಲೀಸ್ ಠಾಣೆ ಪ್ರಕರಣ ದಖಾಲಾಗಿದೆ

Latest Indian news

Popular Stories