Kodagu

ಮರಕ್ಕೆ ಅಪ್ಪಳಿಸಿದ ಬೈಕ್ : ಇಬ್ಬರು ಮೃತ್ಯು

ಸುಂಟಿಕೊಪ್ಪ ಸಮೀಪದ ಶಾಂತಿಗೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನೆನ್ನೆ ರಾತ್ರಿ 10 ಗಂಟೆ ಸುಮಾರಿಗೆ ನಡೆದ ಬೈಕ್ ಅಪಘಾತದಲ್ಲಿ ಓರ್ವ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿ, ಇನ್ನೋರ್ವ ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ಅಸು ನೀಗಿದ್ದಾನೆ.

ಪಿರಿಯಾಪಟ್ಟಣ ತಾಲ್ಲೂಕು ನವಿಲೂರು ಗ್ರಾಮದ ಆಕಾಶ್ ಮತ್ತು ಪ್ರಸನ್ನ ಮೃತ ದುರ್ದೈವಿಗಳಾಗಿದ್ದಾರೆ. ಪಿರಿಯಾಪಟ್ಟಣದಿಂದ ಮಡಿಕೇರಿಗೆ ಸೆಂಟ್ರಿಂಗ್ ಕೆಲಸದ ನಿಮಿತ್ತ ಆಗಮಿಸುತ್ತಿದ್ದ ಸಂದರ್ಭ ಶಾಂತಿಗೇರಿ ಸಮೀಪ ರಾತ್ರಿ 10 ಗಂಟೆ ಸಮಯದಲ್ಲಿ ಇವರ ಬೈಕ್ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ಮರಕ್ಕೆ ಅಪ್ಪಳಿಸಿದೆ. ಇದರಿಂದ ತೀವ್ರ ಗಾಯಗೊಂಡ ಆಕಾಶ್ ಎಂಬಾತ ಸ್ಥಳದಲ್ಲಿಯೇ ಉಸಿರು ಚೆಲ್ಲಿದ್ದಾನೆ. ಅಪಘಾತದಿಂದ ಚಿಂತಾಜನಕನಾಗಿದ್ದ ಇನ್ನೋರ್ವ ಸವಾರ ಪ್ರಸನ್ನ ಎಂಬಾತನನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾನೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button