
ಕೊಡಗಿನಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳು 4808
ಮಡಿಕೇರಿ ಮೇ ೧೫ : ಕೊಡಗು ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ ೮ ಗಂಟೆ ವೇಳೆಗೆ ೪೮೮ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿದೆ. ೪೫೭ ಆರ್.ಟಿ.ಪಿ.ಸಿ.ಆರ್ ಮತ್ತು ೩೧ ಪ್ರಕರಣಗಳು ರಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ಕಂಡು ಬಂದಿದೆ.
ಜಿಲ್ಲೆಯಲ್ಲಿ ೪೮೦೮ ಸಕ್ರಿಯ ಪ್ರಕರಣಗಳಿದ್ದು, ಕಂಟೈನ್ ಮೆಂಟ್ ವಲಯಗಳ ಸಂಖ್ಯೆ ೪೮೫ ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ.
ಮಡಿಕೇರಿ ತಾಲ್ಲೂಕಿನಲ್ಲಿ ೨೧೧, ಸೋಮವಾರಪೇಟೆ ತಾಲ್ಲೂಕಿನಲ್ಲಿ ೧೮೯ ಮತ್ತು ವಿರಾಜಪೇಟೆ ತಾಲ್ಲೂಕಿನಲ್ಲಿ ೮೮ ಹೊಸ ಪ್ರಕರಣಗಳು ಪತ್ತೆಯಾಗಿದೆ. ಜಿಲ್ಲೆಯಲ್ಲಿನ ಒಟ್ಟು ಕೋವಿಡ್-೧೯ ಪ್ರಕರಣಗಳ ಸಂಖ್ಯೆ ೧೯,೭೫೮ ಆಗಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೬೭೯ ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇಲ್ಲಿಯವರೆಗೆ ಒಟ್ಟು ೧೪,೭೨೫ ಮಂದಿ ಗುಣಮುಖರಾಗಿದ್ದಾರೆ.
::: ನಿಯಂತ್ರಣಕ್ಕೆ ಬಾರದ ಸಾವಿನ ಪ್ರಮಾಣ :::
ಕೊಡಗು ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ನಿಯಂತ್ರಣದಲ್ಲಿದ್ದರೂ ಸಾವಿನ ಸಂಖ್ಯೆ ನಿಯಂತ್ರಣಕ್ಕೆ ಬರುತ್ತಿಲ್ಲ. ಕಳೆದ ೨೪ ಗಂಟೆಗಳ ಅವಧಿಯಲ್ಲಿ (ಇಂದು ಬೆಳಗ್ಗೆ ೮ ಗಂಟೆಯವರೆಗೆ) ೧೨ ಮಂದಿ ಮೃತಪಟ್ಟಿದ್ದು, ಇಲ್ಲಿಯವರೆಗೆ ಒಟ್ಟು 225 ಮರಣ ಪ್ರಕರಣಗಳು ವರದಿಯಾಗಿದೆ.




