ಕೊಡಗಿನಲ್ಲಿ ೨೪ ಗಂಟೆಗಳಲ್ಲಿ ೧೨ ಸಾವು

ಮಡಿಕೇರಿ ಮೇ ೫ : ಕೊಡಗು ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಕಳೆದ ೨೪ ಗಂಟೆಗಳಲ್ಲಿ (ಇಂದು ಬೆಳಗ್ಗೆ ೮ ಗಂಟೆಯ ವರೆಗೆ) ೧೨ ಮಂದಿ ಮೃತಪಟ್ಟಿದ್ದಾರೆ. ಇಲ್ಲಿಯವರೆಗಿನ ಒಟ್ಟು ಸಾವಿನ ಸಂಖ್ಯೆ ೧೪೫ ಆಗಿದ್ದು, ಆತಂಕ ಮೂಡಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-೧೯ ಪ್ರಕರಣಗಳ ಸಂಖ್ಯೆ ೧೩,೮೧೩ ಆಗಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೩೯೬ ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇಲ್ಲಿಯವರೆಗೆ ಒಟ್ಟು ೯೦೧೭ ಮಂದಿ ಗುಣಮುಖರಾಗಿದ್ದಾರೆ.
೪೬೫೧ ಸಕ್ರಿಯ ಪ್ರಕರಣಗಳಿದ್ದು, ಕಂಟೈನ್ ಮೆಂಟ್ ವಲಯಗಳ ಸಂಖ್ಯೆ ೪೮೪ ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ ೮ ಗಂಟೆ ವೇಳೆಗೆ ೬೮೧ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿದೆ. ೬೫೧ ಆರ್.ಟಿ.ಪಿ.ಸಿ.ಆರ್ ಮತ್ತು ೩೦ ಪ್ರಕರಣಗಳು ರಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ಕಂಡು ಬಂದಿದೆ.
ಮಡಿಕೇರಿ ತಾಲ್ಲೂಕಿನಲ್ಲಿ ಅತಿಹೆಚ್ಚು ೩೧೩ ಹೊಸ ಕೋವಿಡ್-೧೯ ಪ್ರಕರಣಗಳು ಪತ್ತೆಯಾಗಿದೆೆ. ಈ ಪೈಕಿ ೨೯೯ ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮತ್ತು ೧೪ ಪ್ರಕರಣಗಳು ರಾಪಿಡ್ ಆಂಟಿಜೆನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲ್ಲೂಕಿನಲ್ಲಿ ೧೮೧ ಮತ್ತು ವಿರಾಜಪೇಟೆ ತಾಲ್ಲೂಕಿನಲ್ಲಿ ೧೮೭ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿದೆ.

Latest Indian news

Popular Stories