ಸಾರ್ವಜನಿಕರ ಮನವಿಗಳನ್ನು ಅತಿ ಶೀಘ್ರದಲ್ಲಿ ಪರಿಹಾರ ಮಾಡಲಾಗುತ್ತದೆ | ಜನ ಸ್ಪಂದನ ಕಾರ್ಯಕ್ರಮದಲ್ಲಿ ಶಾಸಕ ಏ ಎಸ್ ಪೊನ್ನಣ್ಣ

*********************
ವಿರಾಜಪೇಟೆ ತಾಲೂಕಿನ ಮೊಗರಗಲ್ಲಿಯ ಕಾವೇರಿ ಕಲ್ಯಾಣ ಮಂಟಪದಲ್ಲಿ ಬುಧವಾರ ತಾಲೂಕು ಮತ್ತು ಪುರಸಭೆ ಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ ಮಾತನಾಡಿದರು.

ಸಾರ್ವಜನಿಕರ ಅಹವಾಲುಗಳನ್ನು ಸಂಬಂಧಿಸಿದ ಸರಕಾರಿ ಕಚೇರಿಗಳ ಅಧಿಕಾರಿಗಳಿಗೆ ನೀಡಿ ಪರಿಹಾರ ಸೂಚಿಸುವಂತೆ ಸಲಹೆ ನೀಡಿದರು ಪ್ರತಿಯೊಬ್ಬರ ಸಮಸ್ಯೆಗಳನ್ನು ಹರಿಸಲಾಗುವುದು ಹಾಗೆಯೇ ಸಮಸ್ಯೆಗಳು ಬಾರದಂತೆ ಅಗತ್ಯ ಕ್ರಮ ವಹಿಸಲಾಗುವುದು ಎಂದು ಪೊನ್ನಣ್ಣನವರು ತಿಳಿಸಿದರು.

ಸರ್ಕಾರಿ ಅಧಿಕಾರಿಗಳು ಎಚ್ಚೆತ್ತುಕೊಂಡು ಕಾರ್ಯ ನಿರ್ವಹಿಸುವಂತೆ ಕೋರಿದರು.

135 ಮನವಿ ಪತ್ರಗಳು ಸ್ವೀಕಾರವಾಗಿದ್ದು ಕೆಲವೊಂದು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ನೀಡಲಾಯಿತು. ಮತ್ತೆ ಕೆಲವೊಂದು ಸಮಸ್ಯೆಗಳನ್ನು ಸರ್ಕಾರಿ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತರಲಾಯಿತು.

ನಿರುದ್ಯೋಗ,ವಸತಿ, ಕುಡಿಯುವ ನೀರು, ರಸ್ತೆ ಸಂಬಂಧ, ದುರಸ್ತಿ,ಚಿಕಿತ್ಸೆ,ಹಕ್ಕು ಪತ್ರ,ಧನಸಹಾಯ, ವಿದ್ಯುತ್ ಮುಂತಾದ ಸಮಸ್ಯೆಗಳು ಮೇಲ್ನೋಟಕ್ಕೆ ಕಂಡುಬಂದಿದ್ದು ಪ್ರತಿಯೊಂದು ಮನವಿ ಪತ್ರಗಳಿಗೂ ಪರಿಹಾರ ಸೂಚಿಸಲಾಯಿತು.

ಜಿಲ್ಲಾಧಿಕಾರಿ ವೆಂಕಟರಾಜ ಮಾತನಾಡಿ ಕುಂದು ಕೊರತೆ ಮನವಿಗಳನ್ನು ನೀಡಲು ಕೇಂದ್ರ ಸ್ಥಾನಕ್ಕೆ ತೆರಳುವ ಅವಶ್ಯಕತೆ ಇರುವುದಿಲ್ಲ ಜನಸ್ಪಂದನ ಕಾರ್ಯಕ್ರಮದಲ್ಲಿ ನೀಡಿದರೆ ಅಲ್ಲಿಯೇ ಪರಿಹಾರ ಒದಗಿಸಲಾಗುವುದು ಪ್ರತಿಯೊಬ್ಬರ ಸಮಸ್ಯೆಗಳನ್ನು ಇಲ್ಲಿ ಪರಿಗಣಿಸಿ ಪರಿಹಾರ ಒದಗಿಸಲಾಗುತ್ತದೆ ಎಂದು ತಿಳಿಸಿದರು. ಜನಸ್ಪಂದನ ಕಾರ್ಯಕ್ರಮದಲ್ಲಿ ಸುಮಾರು ಸಾವಿರಕ್ಕೂ ಅಧಿಕ ಸಾರ್ವಜನಿಕರು ಭಾಗವಹಿಸಿದ್ದರು.

ಜಿಲ್ಲಾಧಿಕಾರಿ ವೆಂಕಟರಾಜ, ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ವರ್ಣಿತ್ ನೇಗಿ, ಅಪರ ಜಿಲ್ಲಾಧಿಕಾರಿ ಬಿ ಎನ್ ವೀಣಾ,ಸರಕಾರಿ ಇಲಾಖೆಯ ಮುಖ್ಯ ಅಧಿಕಾರಿಗಳು ಪೋಲಿಸ್ ಇಲಾಖೆಯ ಸಿಬ್ಬಂದಿಗಳು ಇತರರು ಇದ್ದರು.

Latest Indian news

Popular Stories