ಕೊಡಗು: ಕೊಡಗು ಎ. ಡಿ.ಸಿ ನಂಜುಂಡೆ ಗೌಡ ಮನೆಗೆ ಲೋಕಾಯುಕ್ತ. ದಾಳಿ ನಡೆಸಿದೆ.
ಮುಂಜಾನೆಯಿಂದ ಮನೆ ಶೋದಕ್ಕೆ ಅಧಿಕಾರಿಗಳ ತಂಡ ಮುಂದಾಗಿದೆಮುಂಜಾನೆ 4 ಗಂಟೆಗೆ ನಂಜುಂಡೆ ಗೌಡ ಮನೆ ಮೇಲೆ ಧಾಳಿ ನಡೆಸಿದ ಅಧಿಕಾರಿಗಳು ಶೋಧ ಕಾರ್ಯ ಮುಂದುವರಿಸಿದ್ದಾರೆ.
ಮಡಿಕೇರಿಯ ಕಾರ್ಯಪ್ಪ ವೃತ್ತದ ಬಳಿ ಇರುವ ಮನೆ. ಲೋಕಾಯುಕ್ತ ಎಸ್ ಪಿ. ಸುರೇಶ್ ಬಾಬು ಮಾರ್ಗದರ್ಶನದಲ್ಲಿ ಡಿ ವೈ ಎಸ್ ಪಿ. ಪವನ್ ಕುಮಾರ್ , ಇನ್ಸ್ ಪೆಕ್ಟರ್ ಲೋಕೇಶ್ ಮತ್ತು ಸಿಬ್ಬಂದಿಗಳು ಪರಿಶೀಲನೆ ಕೈಗೊಂಡಿದ್ದಾರೆ.
ಪಿರಿಯಾಪಟ್ಟಣದಲ್ಲಿ ಇರುವ ಮಾವನ ಮನೆ ಹಾಗೂ ಮೈಸೂರಿನಲ್ಲಿ ಇರುವ ಸಂಬಂಧಿಕರ ಮನೆ ಮೇಲೂ ಏಕಕಾಲದಲ್ಲಿ ಲೋಕಾಯುಕ್ತ ದಾಳಿ ನಡೆಸಿದ್ದಾರೆ. ಮಡಿಕೇರಿ ಮನೆಯಲ್ಲಿ ನಗದು ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.