Kodagu

ಕೊಡಗು ಜಿಲ್ಲೆಯ ಮಳೆ ವಿವರ


ಮಡಿಕೇರಿ ಜೂ.28(ಕರ್ನಾಟಕ ವಾರ್ತೆ):-ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ ಮಳೆ 21.33 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 17.93 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 289.65 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 648.24 ಮಿ.ಮೀ ಮಳೆಯಾಗಿತ್ತು.


ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 38.97 ಮಿ.ಮೀ. ಕಳೆದ ವರ್ಷ ಇದೇ ದಿನ 25.15 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 438.83 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 879.48 ಮಿ.ಮೀ. ಮಳೆಯಾಗಿತ್ತು.
ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 18.40 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 16.18 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 216.74 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ ಕಳೆದ ವರ್ಷ 581.41 ಮಿ.ಮೀ. ಮಳೆಯಾಗಿತ್ತು.


ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 6.63 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 12.47 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 213.38 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 483.83 ಮಿ.ಮೀ. ಮಳೆಯಾಗಿತ್ತು.
ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 13.40, ನಾಪೋಕ್ಲು 56.20, ಸಂಪಾಜೆ 32.50, ಭಾಗಮಂಡಲ 53.80, ವಿರಾಜಪೇಟೆ ಕಸಬಾ 41, ಹುದಿಕೇರಿ 21.60, ಶ್ರೀಮಂಗಲ 11.40, ಪೊನ್ನಂಪೇಟೆ 20, ಅಮ್ಮತ್ತಿ 16, ಬಾಳೆಲೆ 0.40, ಸೋಮವಾರಪೇಟೆ ಕಸಬಾ 5, ಶನಿವಾರಸಂತೆ 1.40, ಶಾಂತಳ್ಳಿ 9, ಕೊಡ್ಲಿಪೇಟೆ 2.20, ಕುಶಾಲನಗರ 7, ಸುಂಟಿಕೊಪ್ಪ 15.20 ಮಿ.ಮೀ.ಮಳೆಯಾಗಿದೆ.


ಹಾರಂಗಿ ಜಲಾಶಯದ ನೀರಿನ ಮಟ್ಟ (28-06-2023) ವರದಿ


  ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2859 ಅಡಿಗಳು, ಇಂದಿನ ನೀರಿನ ಮಟ್ಟ 2820.05 ಅಡಿಗಳು. ಕಳೆದ ವರ್ಷ ಇದೇ ದಿನ 2853.37 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 7.20 ಮಿ.ಮೀ., ಇಂದಿನ ನೀರಿನ ಒಳಹರಿವು 252 ಕ್ಯುಸೆಕ್, ಕಳೆದ ವರ್ಷ ಇದೇ ದಿನ 548 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 30 ಕ್ಯುಸೆಕ್. ನಾಲೆಗೆ 20 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 40 ಕ್ಯುಸೆಕ್. ನಾಲೆಗೆ 20 ಕ್ಯುಸೆಕ್.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button