Kodagu

ಕೊಡಗು: ಆನೆಕಾಡು ಬಳಿ ಕಾರು ಅಪಘಾತ; ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರು

ಕೊಡಗು ಜಿಲ್ಲೆ ಕುಶಾಲ್ ನಗರ ತಾಲ್ಲೂಕು ಆನೆಕಾಡು ತಿರುವಿನಲ್ಲಿ ಅತಿಯಾದ ವೇಗದಲ್ಲಿ ಬಂದ ಕಾರು ಮರಕ್ಕೆ ಡಿಕ್ಕಿ ಹೊಡೆದು ನುಚ್ಚುನೂರಾದ ಘಟನೆ ನಡೆದಿದೆ.

ಬೆಂಗಳೂರು ಮೂಲದ ಪ್ರವಾಸಿಗರು ಮಡಿಕೇರಿ ಕಡೆಗೆ ಪ್ರವಾಸಕ್ಕೆ ತೆರಳುತ್ತ ಇರುವ ಸಮಯದಲ್ಲಿ ಚಾಲಕನ ಅತಿಯಾದ ವೇಗ ನಿಯಂತ್ರಣಕ್ಕೆ ಬಾರದೆ ತಿರುವಿನಲ್ಲಿ ಮರಕ್ಕೆ ಡಿಕ್ಕಿ ಹೊಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿರುತ್ತಾರೆ.

ಕಾರಿನಲ್ಲಿದ್ದ ಪ್ರವಾಸಿಗರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು,ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ,ಸ್ಥಳಕ್ಕೆ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆ ಅಧಿಕಾರಿಗಳು ಭೇಟಿ ಕೊಟ್ಟು ಪ್ರಕರಣ ದಾಖಲಿಸಿಕೊಂಡಿರುತ್ತಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button