KODAGU | ವಾಹನಗಳಲ್ಲಿನ ಎಲ್ ಇಡಿ ಲೈಟ್ – ಜನ ಜಾಗೃತಿ

ವಾಹನಗಳಲ್ಲಿ ಕಣ್ಣು ಕುಕ್ಕುವ ಎಲ್ಇಡಿ ಲೈಟ್ಗಳನ್ನು ಅಳವಡಿಸುವುದರ ವಿರುದ್ಧ ಕಠಿಣ ಕ್ರಮಕ್ಕೆ ಸಂಚಾರ ಪೊಲೀಸರು ಮುಂದಾಗಿದ್ದಾರೆ ಈ ರೀತಿಯ ಲೈಟ್ಗಳನ್ನು ಅಳವಡಿಸಿದ್ದರಿಂದ ಎದುರಿನಿಂದ ಬರುವ ವಾಹನಗಳ ಚಾಲಕರಿಗೆ ತೊಂದರೆಯಾಗುತ್ತಿದ್ದು ಅಪಘಾತಗಳಿಗೂ ಕಾರಣವಾಗುತ್ತಿದೆ. ಹೀಗಾಗಿ ಇಂತಹ ಲೈಟ್ಗಳನ್ನು ಅಳವಡಿಸುವವರ ವಿರುದ್ಧ ಕಠಿಣ ಕ್ರಮಕ್ಕೆ ಸಂಚಾರ ಪೊಲೀಸರು ಮುಂದಾಗಿದ್ದಾರೆ.

ರಸ್ತೆ ಅಪಘಾತಗಳು ಮತ್ತು ಅದರಿಂದಾಗುವ ಸಾವು ನೋವುಗಳನ್ನು ತಪ್ಪಿಸಲು ಕೇಂದ್ರ ಮೋಟಾರ್ ವಾಹನಗಳ ನಿಯಮಗಳ ಅಡಿಯಲ್ಲಿ ಅನುಮತಿಸಲಾದ ಲೈಟ್ಗಳನ್ನು ಮಾತ್ರ ವಾಹನಗಳಲ್ಲಿ ಅಳವಡಿಸಬೇಕು ಎಂದು ಕರ್ನಾಟಕ ಸರಕಾರ ಆದೇಶ ಹೊರಡಿಸಿದೆ.

ರಸ್ತೆ ಸುರಕ್ಷತಾ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಅವರು ಎ ಎನ್ ಐ ಸುದ್ದಿ ಸಂಸ್ಥೆಗೆ ಸಂದರ್ಶನದಲ್ಲಿ ಮಾಹಿತಿ ನೀಡಿದ್ದರು ಇದರ ಬೆನ್ನಲ್ಲೇ ಈಗ ಮಡಿಕೇರಿ ನಗರ ದಲ್ಲಿ ಕಣ್ಣು ಕುಕ್ಕುವ ಎಲ್ಇಡಿ ಲೈಟ್ ಗಳ ಬಗ್ಗೆ ಮಡಿಕೇರಿ ನಗರ ವೃತ್ತ ನಿರೀಕ್ಷಕ ರಾಜು ಅವರ ನೇತೃತ್ವದಲ್ಲಿ ಜಾಗೃತಿ ಮೂಡಿಸಲಾಯಿತು. ಈ ಸಂದರ್ಭದಲ್ಲಿ ಮಡಿಕೇರಿ ನಗರ ಪಿಎಸ್ಐ ಲೋಕೇಶ್, ಸಂಚಾರಿ ಪೊಲೀಸ್ ಠಾಣಾ ಪಿ ಎಸ್ ಐ ತಮ್ಮಯ್ಯ ಎಎಸ್ಐ ನಂದ ಐ. ಪಿ ಹಾಗೂ ಸಿಬ್ಬಂದಿಗಳು ಇದ್ದರು.

Latest Indian news

Popular Stories