ಕೊಡಗು: ಮಸೀದಿಯಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ


ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಮಸೀದಿಯೊಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಪೋಕ್ಲು ಬಳಿಯ ಎಮ್ಮೆಮಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಡಿಯಾಣಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

ಪಡಿಯಾಣಿ ಬೈರಂಡಾಣೆ ಗ್ರಾಮದ ನಿವಾಸಿ ಬಿ.ಯು. ಶಾದುಲಿ (55) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ಕೂಲಿ ಕೆಲಸ ಮಾಡಿಕೊಂಡಿದ್ದ ಶಾದುಲಿ ಕಳೆದ ಕೆಲವು ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.

ಶುಕ್ರವಾರ ಬೆಳಗ್ಗೆ ಮನೆಯಿಂದ ಹೊರಗಡೆ ತೆರಳಿದ್ದ ಶಾದುಲಿ ತನ್ನ ಮನೆ ಸಮೀಪದಲ್ಲಿರುವ ಬೈರಂಡಾಣೆ ಮಸೀದಿಯ ಮೇಲ್ಭಾಗದ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಸ್ಥಳಕ್ಕೆ ನಾಪೋಕ್ಲು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Latest Indian news

Popular Stories