ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ : ವಿರಾಜಪೇಟೆಯ ಬ್ಲ್ಯಾಕ್ ಕೋಬ್ರ ಚಾಂಪಿಯನ್

ಮಡಿಕೇರಿ ಏ.೧೨ : ಕೊಡಗು ಮುಸ್ಲಿಂ ಸ್ಪೋರ್ಟ್ಸ್ ಅಕಾಡೆಮಿ ಹಾಗೂ ಎಸ್‌ಇಎಸ್ ಬೇತ್ರಿ ಇವರ ಸಂಯುಕ್ತಾಶ್ರಯದಲ್ಲಿ ನಾಪೋಕ್ಲು ಚೆರಿಯಪರಂಬು ಜನರಲ್ ಕೆ.ಎಸ್.ತಿಮ್ಮಯ್ಯ ಕ್ರೀಡಾಂಗಣದಲ್ಲಿ ೧೭ನೇ ವರ್ಷದ ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿಗೆ ಸಂಭ್ರಮದ ತೆರೆ ಬಿದ್ದಿದೆ.
ಇಂದು ನಡೆದ ಅಂತಿಮ ಪಂದ್ಯಾಟದಲ್ಲಿ ವಿರಾಜಪೇಟೆಯ ಬ್ಲ್ಯಾಕ್ ಕೋಬ್ರ ತಂಡ ಚಾಂಪಿಯನ್ ಆಗಿ ಹೊರ ಹೊಮ್ಮಿತು.
ನೆಲ್ಯಹುದಿಕೇರಿಯ ರಾಯಲ್ ಬ್ರದರ್ಸ್ ತಂಡ ದ್ವಿತೀಯ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿತು.
ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಸೇರಿದಂತೆ ಅತಿಥಿ ಗಣ್ಯರು ವಿಜೇತರಿಗೆ ಬಹುಮಾನ ವಿತರಿಸಿದರು.
ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಹಬ್ಬದ ಸಂಸ್ಥಾಪಕ ಕುಪ್ಪೊಂಡAಡ ಅಬ್ದುಲ್ ರಶೀದ್ ಮತ್ತಿತರರು ಹಾಜರಿದ್ದರು.
ಸಮಾರೋಪ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು ಹಾಗೂ ಸಮಾಜ ಸೇವಕರನ್ನು ಸನ್ಮಾನಿಸಿ ಗೌರವಿಸಲಾಯಿತು.
ಶಾಸಕ ಕೆ.ಜಿ.ಬೋಪಯ್ಯ ಅವರು ಮಾತನಾಡಿ ಸಮಾಜವನ್ನು ಒಗ್ಗೂಡಿಸುವ ಉದ್ದೇಶದಿಂದ ಆರಂಭಗೊAಡ ಕ್ರಿಕೆಟ್ ಹಬ್ಬವನ್ನು ಇನ್ನು ಮುಂದೆಯೂ ಅರ್ಥಪೂರ್ಣವಾಗಿ ನಡೆಸಿಕೊಂಡು ಹೋಗಲು ಆಯೋಜಕರಿಗೆ ಎಲ್ಲರೂ ಸಹಕಾರ ನೀಡಬೇಕೆಂದು ಕರೆ ನೀಡಿದರು. ಫೋಟೋ :: ಮುಸ್ಲಿಂ ಕಪ್

Latest Indian news

Popular Stories