Kodagu

ಕೊಡಗು ಜಿಲ್ಲೆಯಲ್ಲಿ ಮುಂದುವರಿದ ಗಾಳಿ ಬಾರಿ ಮಳೆ ಭಾಗ ಮಂಡಲದಲ್ಲಿ ಅತಿ ಹೆಚ್ಚು ಮಳೆ | ಸಾರ್ವಜನಿಕ ಆಸ್ತಿಪಾಸ್ತಿಗೆ ಅಪಾರ ಹಾನಿ

ಉಡುಪಿ:ಜಿಲ್ಲೆಯಲ್ಲಿ ಬಾರಿ ಗಾಳಿಯೊಂದಿಗೆ ಬಿರುಸಿವ ಮಳೆ ಮುಂದುವರಿದಿದ್ದು ನದಿ,ತೊರೆ ಹಳ್ಳ ಕೊಳ್ಳ ಜಲಾಶಯಗಳಲ್ಲಿನ ನೀರಿನ ಮಟ್ಟ ಏರಿಕೆಯಾಗಿದ್ದು ವಿವಿಧೆಡೆ ಮನೆಗಳು ಬಿದ್ದು ಅಪಾರ ನಷ್ಟ ಉಂಟಾಗಿದೆ, ಇದೇ ಸಂಧರ್ಭದಲ್ಲಿ ಅಪಾಯದಂಚಿನಲ್ಲಿ ವಾಸಿಸುತ್ತಿರುವವರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಗೊಳಿಸಲಾಗಿದೆ, ಮಡಿಕೇರಿ ತಾಲೂಕಿನ ಸಂಪಾಜೆ ಹೋಬಳಿ ಮದೆ ಗ್ರಾಮದ ಮನೋಹರಿ ಎಂಬವರ ಮನೆಗೆ ಬರೆ ಕುಸಿದು ಹಾನಿ,ಮಡಿಕೇರಿ ತಾಲೂಕು ಸಂಪಾಜೆ ಹೋಬಳಿ ಸಂಪಾಜೆ ಗ್ರಾಮದ ಬಂಡನ ಸರೋಜನಿ ಎಂಬುವರ ಮನೆ ಸಮೀಪ ಹೆಚ್ಚಿನ ಮಳೆಯಿಂದ ಬರೆ ಕುಸಿದಿದೆ.

ಸೋಮವಾರಪೇಟೆ ತಾಲೂಕಿನ ಬಿಳಕಿಕೊಪ್ಪ ಗ್ರಾಮದ ಸರಸ್ವತಿ ರವರ ಮನೆ ಮೇಲೆ ತೀವ್ರ ಮಳೆಯಿಂದ ಮರ ಬಿದ್ದು ಮನೆ ಹಾನಿಯಾದ ವರದಿಯಾಗಿದೆ.

ಸೋಮವಾರಪೇಟೆ ಹೋಬಳಿಯ ದೊಡ್ಡಬೂರು ಗ್ರಾಮದ ಗೌರಿ ರಾಜು ಅವರ ವಾಸದ ಮನೆಯು ಭಾರಿ ಮಳೆ- ಗಾಳಿಗೆ ಮನೆಯ ಗೋಡೆ ಕುಸಿದಿದೆ.

ಕೊಡ್ಲಿಪೇಟೆ ಹೋಬಳಿ ಅವರೇದಾಳು ಗ್ರಾಮದ ಮೀನಾಕ್ಷಿ ರಂಗಯ್ಯ ಎಂಬುವರ ಮನೆ ಬಿರುಸಿನ ಮಳೆಯಿಂದಾಗಿ ಹಾನಿ ಆಗಿದೆ. ಸೋಮವಾರಪೇಟೆ ಹೋಬಳಿ ಮೂವತ್ತೋಕ್ಲು ಗ್ರಾಮದ ಜಾನು ಬೇಡು ಅವರ ಮನೆಯು ಹೆಚ್ಚಿನ ಮಳೆಗೆ ಹಾನಿಯಾಗಿದೆ.

ಕುಶಾಲನಗರ ಹೋಬಳಿ ಮಾದಾಪಟ್ಟಣ ಗ್ರಾಮದ ನಿವಾಸಿ ಜಯಮ್ಮ ಕೊಂ. ಮರಿರಂಗಯ್ಯ ಅವರ ವಾಸದ ಮನೆಯ ಗೋಡೆ ಹಾಗೂ ಮೇಲ್ಛಾವಣಿ ಹಾನಿಯಾಗಿದ್ದು, ತಹಶೀಲ್ದಾರ್ ಕಿರಣ್ ಗೌರಯ್ಯ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿದ್ದಾರೆ.

‌‌ಕುಶಾಲನಗರ ತಾಲ್ಲೂಕಿನ ಗುಡ್ಡೆಹೊಸೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಅತ್ತೂರು ಗ್ರಾಮದ ಜನಾರ್ಧನ್ ಎಂಬುವವರ ಮನೆಯ ಮೇಲ್ಚಾವಣಿ ಹಾಗೂ ಗೋಡೆಯು ಭಾರಿ ಮಳೆಗೆ ಕುಸಿದಿದೆ. ಈ ಹಿನ್ನೆಲೆ ಶಾಸಕರಾದ ಡಾ.ಮಂತರ್ ಗೌಡ ಅವರು ಭೇಟಿ ನೀಡಿ ವೀಕ್ಷಿಸಿದರು. ಈ ಸಂಬಂಧ ಕುಟುಂಬವನ್ನು ಹತ್ತಿರದ ಸಮುದಾಯ ಭವನಕ್ಕೆ ಸ್ಥಳಾಂತರಿಸಲಾಗಿದ್ದು, ಅಗತ್ಯ ಪಡಿತರವನ್ನು ಶಾಸಕರು ವಿತರಿಸಿದರು.

ತಹಶಿಲ್ದಾರಾದ ಕಿರಣ್ ಗೌರಯ್ಯ, ಗುಡ್ಡೆ ಹೊಸೂರು ಗ್ರಾಮ ಪಂಚಾಯಿತಿ ಅಧಿಕಾರಿ ಸುಮೇಶ್, ಕಂದಾಯ ನಿರೀಕ್ಷಕರಾದ ಸಂತೋಷ್ ಹಾಗೂ ಗ್ರಾಮ ಲೆಕ್ಕಾಧಿಕಾರಿ ಗೌತಮ್, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷರಾದ ವಿ.ಪಿ.ಶಶಿಧರ ಇತರರು ಇದ್ದರು.

ಕೊಡಗು ಜಿಲ್ಲೆಯಲ್ಲಿ ಬಿರುಸಿನ ಮಳೆ; ಜನಜೀವನ ಅಸ್ತವ್ಯಸ್ತ

ಜಿಲ್ಲೆಯಲ್ಲಿ ಬಿರುಸಿನ ಮಳೆ ಸುರಿಯುತ್ತಿದೆ. ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದ್ದು, ಜಿಲ್ಲೆಯ ಜನಜೀವನ ಅಸ್ತವ್ಯಸ್ತಗೊಂಡಿದೆ.
ಭಾಗಮಂಡಲ ತ್ರಿವೇಣಿ ಸಂಗಮ ತುಂಬಿ ಹರಿಯುತ್ತಿದೆ. ಜಿಲ್ಲೆಯ ಅಬ್ಬಿ, ಇರ್ಪು, ಮಲ್ಲಳ್ಳಿ, ಚೇಲಾವರ ಸೇರಿದಂತೆ ಹಲವು ಜಲಪಾತಗಳು ಬೋರ್ಗರೆಯುತ್ತಿವೆ. ಜಿಲ್ಲೆಯ ನದಿ, ತೊರೆ, ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಕಾವೇರಿ ನದಿ ಪಾತ್ರದಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದೆ.

ಜಿಲ್ಲೆಯಲ್ಲಿ ಸುರಿಯುತ್ತಿರುವ ವ್ಯಾಪಕ ಮಳೆಗೆ ಜಿಲ್ಲೆಯ ವಿವಿಧ ಕಡೆಗಳಲ್ಲಿ ಬರೆ ಕುಸಿತ, ಮನೆಗಳಿಗೆ ಹಾನಿ ಉಂಟಾಗಿದ್ದು, ರಸ್ತೆಯಲ್ಲಿ ಅಲ್ಲಲ್ಲಿ ನೀರು ನಿಂತು ಓಡಾಟಕ್ಕೆ ಅಡೆತಡೆ ಉಂಟಾಗಿದೆ.

ಮನೆ ಹಾನಿಯಾದ ಕೆಲವು ಕುಟುಂಬಗಳನ್ನು ಸ್ಥಳಾಂತರಿಸಲಾಗಿದ್ದು, ಪಡಿತರ ವಿತರಣಾ ಕಾರ್ಯವು ನಡೆದಿದೆ. ಕಾವೇರಿ ನದಿ ಪಾತ್ರದಲ್ಲಿ ನೀರಿನ ಪ್ರಮಾಣ ಹೆಚ್ಚಾಗಿರುವುದರಿಂದ ಕರಡಿಗೋಡು, ಸಿದ್ದಾಪುರ, ನೆಲ್ಯಹುದಿಕೇರಿ ಮತ್ತಿತರ ಭಾಗದ ನದಿ ಭಾಗದಲ್ಲಿ ವಾಸಿಸುವ ಕುಟುಂಬಗಳ ಸ್ಥಳಾಂತರಕ್ಕೆ ಜಿಲ್ಲಾಡಳಿತ ಕ್ರಮವಹಿಸಿದೆ. ಜಿಲ್ಲೆಯ ಆಯಾಯ ತಾಲ್ಲೂಕಿನ ತಹಶೀಲ್ದಾರರು ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button