ಕೊಡಗಿನಲ್ಲೂ ಮುಂದುವರಿದ ಭಾರೀ ಮಳೆ

ಕೊಡಗಿನಲ್ಲಿ ಕಳೆದ ಐದು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು ಹೊಳೆ ಹಳ್ಳ ಕೊಳ್ಳ ತುಂಬಿ ಹರಿಯುತ್ತಿದೆ ವಾಡಿಕೆಯಂತೆ ಜೂನ್ ಆರಂಭದಲ್ಲಿ ಮಳೆ ಇಲ್ಲದೆ ಅಲ್ಲೊಂದು ಇಲ್ಲೊಂದು ಎಂಬಂತೆ ಮಳೆ ಬೀಳುತ್ತಿತ್ತು ಇದೀಗ ಜಿಲ್ಲೆಯಾದ್ಯಂತ ಬಿರುಸಿನಿಂದ ಮಳೆಯಾಗುತ್ತಿದೆ ,ರೈತರ ಮುಖದಲ್ಲಿ ಸಂತಸ ತಂದಿದೆ,

ಕೊಡಗು ಜಿಲ್ಲೆಯ ಮಳೆ ವಿವರ

:-ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ ಮಳೆ 62.63 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 4.36 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 644.45 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 234.62 ಮಿ.ಮೀ ಮಳೆಯಾಗಿತ್ತು.

ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 90.13 ಮಿ.ಮೀ. ಕಳೆದ ವರ್ಷ ಇದೇ ದಿನ 11.63 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 923.78 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 409.97 ಮಿ.ಮೀ. ಮಳೆಯಾಗಿತ್ತು.

ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 85.20 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 3.90 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 622.95 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 168.01 ಮಿ.ಮೀ. ಮಳೆಯಾಗಿತ್ತು.

ಪೊನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 72.30 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 1.96 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 638.79 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 164.68 ಮಿ.ಮೀ. ಮಳೆಯಾಗಿತ್ತು.

ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 44.80 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 3.20 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 516.81 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 180.26 ಮಿ.ಮೀ. ಮಳೆಯಾಗಿತ್ತು.

ಕುಶಾಲನಗರ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 20.70 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 1.10 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 519.90 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 250.20 ಮಿ.ಮೀ. ಮಳೆಯಾಗಿತ್ತು.

ಆರೆಂಜ್ ಅಲರ್ಟ್:
ಹವಾಮಾನ ಇಲಾಖೆಯ ಸೂಚನೆಯಂತೆ ಮುಂದಿನ ದಿನಗಳಲ್ಲಿ ಬಾರೀ ಮಳೆಯಾಗುವ ಸಂಭವಿದ್ದು ,ಕೊಡಗು ಮುನ್ನಚ್ಚರಿಕೆಯಾಗಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ,

ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ

ಮಡಿಕೇರಿ ಕಸಬಾ 56.20,

ನಾಪೋಕ್ಲು 85.20,

ಸಂಪಾಜೆ 73.50,

ಭಾಗಮಂಡಲ 145.60,

ವಿರಾಜಪೇಟೆ 89.40,

ಅಮ್ಮತ್ತಿ 81,

ಹುದಿಕೇರಿ 66,

ಶ್ರೀಮಂಗಲ 65,

ಪೊನ್ನಂಪೇಟೆ 83.02,

ಬಾಳೆಲೆ 75.16,

ಸೋಮವಾರಪೇಟೆ ಕಸಬಾ 43.40,

ಶನಿವಾರಸಂತೆ 28,

ಶಾಂತಳ್ಳಿ 85,

ಕೊಡ್ಲಿಪೇಟೆ 22.80,

ಕುಶಾಲನಗರ 10.40,

ಸುಂಟಿಕೊಪ್ಪ 31 ಮಿ.ಮೀ.ಮಳೆಯಾಗಿದೆ.

ಹಾರಂಗಿ ಜಲಾಶಯದ ನೀರಿನ ಮಟ್ಟ (26-06-2024) ವರದಿ

ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2830.62 ಅಡಿಗಳು. ಕಳೆದ ವರ್ಷ ಇದೇ ದಿನ 2819.74 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 7.80 ಮಿ.ಮೀ., ಇಂದಿನ ನೀರಿನ ಒಳಹರಿವು 810 ಕ್ಯುಸೆಕ್, ಕಳೆದ ವರ್ಷ ಇದೇ ದಿನ 230 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 200 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 30 ಕ್ಯುಸೆಕ್. ನಾಲೆಗೆ 20 ಕ್ಯುಸೆಕ್.

Latest Indian news

Popular Stories