Kodagu

ಕೊಡಗಿನಲ್ಲಿ ಗುಡುಗು ಸಹಿತ ಮಳೆ

ಕೊಡಗು: ಜಿಲ್ಲೆಯಲ್ಲಿ ಬೇಸಿಗೆಯ ತಾಪಮಾನ ಅಧಿಕ ವಾಗಿರುವ ಬೆನ್ನಲ್ಲೇ ನಾಪೋಕ್ಲು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಂಗಳವಾರ ಗುಡುಗು ಸಹಿತ ಒಂದು ಇಂಚಿಗೂ ಅಧಿಕ ಮಳೆಯಾಗಿ ಧರೆಗೆ ತಂಪೆರಗಿದೆ.

ಮಂಗಳವಾರ ಮಧ್ಯಾಹ್ನ ನಾಪೋಕ್ಲು ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಕೈಕಾಡು, ಬೇತು, ಚೆರಿಯಪರಂಬು, ಕೊಳಕೇರಿ, ಕುಂಜಿಲ, ಎಮ್ಮೆಮಾಡು, ನೆಲಜಿ, ಕಕ್ಕಬ್ಬೆ ಸೇರಿದಂತೆ ವಿಭಾಗದ ಅಲವು ಗ್ರಾಮಗಳಲ್ಲಿ ಉತ್ತಮ ಮಳೆಯಾಗಿದ್ದರಿಂದ ರೈತರು ಸಂತಸಗೊಂಡಿದ್ದಾರೆ.

ಕಳೆದ ಕೆಲವು ದಿನಗಳಿಂದ ಜಿಲ್ಲೆಯ ವಿವಿಧ ಕಡೆಗಳಲ್ಲಿ ಬಿಸಿಲ ಬೇಗೆ ಹೆಚ್ಚಿದ್ದು, ಬಹುತೇಕ ತೋಟಗಳಲ್ಲಿ ಕಾಫಿಗಿಡ, ಕಾಳುಮೆಣಸು ಬಳ್ಳಿಗಳು ಬಿಸಿಲಿನ ತಾಪಕ್ಕೆ ಬಾಡಿ ಹೋಗಿದ್ದವು. ಪ್ರಸಕ್ತ ಸಾಲಿನಲ್ಲಿ ಸಮಯಕ್ಕೆ ಸರಿಯಾಗಿ ಮಳೆಬಾರದೆ ಪರಿತಪಿಸುತ್ತಿದ್ದ ರೈತರಲ್ಲಿ ಮಳೆಯಿಂದ ಮಂದಹಾಸ ಮೂಡಿದೆ.

ನಾಪೋಕ್ಲು ವಿಭಾಗದಲ್ಲಿ ಮಳೆ ಇಲ್ಲದೆ ಕೃಷಿ ಚಟುವಟಿಕೆಗಳಿಗೆ ಮತ್ತು ಕುಡಿಯುವ ನೀರಿಗೂ ಜನರು ಸಮಸ್ಯೆಗಳನ್ನು ಎದುರಿಸುವಂತಾಗಿತ್ತು. ಪವಿತ್ರ ಕಾವೇರಿ ನದಿ ಸೇರಿದಂತೆ ವ್ಯಾಪ್ತಿಯ ಇನ್ನಿತರ ನದಿಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿತ್ತು. ಇದೀಗ ಸಮಸ್ಯೆ ಸ್ವಲ್ಪಮಟ್ಟಿಗೆ ದೂರವಾದಂತಾಗಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button