ಸಿದ್ದಾಪುರದಲ್ಲಿ ಬಿಜೆಪಿ, ಭಜರಂಗದಳ ಸೇರಿದಂತೆ ಹಿಂದೂ ಸಂಘಟನೆಗಳ ಪ್ರತಿಭಟನೆ| ನಿಷೇಧಾಜ್ಞೆ ಜಾರಿ

ಪಕ್ಷವೊಂದರ ಪ್ರಚಾರ ಮೆರವಣಿಗೆ ಸಂಧರ್ಭದಲ್ಲಿ ಕಾರ್ಯಕರ್ತರೊಬ್ಬರು ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ಭಾಗವಾಗಿ ಆರೋಪಿಗಳನ್ನು ಬಂಧಿಸಲು ಹಿಂದೂ ಪರ ಸಂಘಟನೆಗಳು ಸಿದ್ದಾಪುರದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ.

ಪ್ರತಿಭಟನೆಕಾರರು ಕಾಂಗ್ರೆಸ್ ಪಕ್ಷದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ, 25 ಲಕ್ಷ ಪರಿಹಾರ ಹಣವನ್ನು ಕುಟುಂಬ ವರ್ಗಕ್ಕೆ ನೀಡುವಂತೆ ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಆಗಮಿಸುವಂತೆ ಪ್ರತಿಭಟನೆಕಾರರು ಒತ್ತಾಯಿಸಿದ್ದಾರೆ.

ಇದೇ ಸಂದರ್ಭ ಮೃತರ ಮನೆಗೆ ಬಿಜೆಪಿ ಅಭ್ಯರ್ಥಿ ಯದುವೀರ್ ಮತ್ತು ಬಿಜೆಪಿ ಪ್ರಮುಖರು ಭೇಟಿ ನೀಡಿ ಅಂತಿಮ ದರ್ಶನವನ್ನು ಪಡೆದು ಕುಟುಂಬ ವರ್ಗಕ್ಕೆ ಸಾಂತ್ವನ ಹೇಳಿದ್ದಾರೆ.

ಸಿದ್ದಾಪುರದಲ್ಲಿ ಡಿ ವೈ ಎಸ್ ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತು ಏರ್ಪಡಿಸಲಾಗಿದೆ.

ಸಿದ್ದಾಪುರ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿ;

ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ದಂಡ ಪ್ರಕ್ರಿಯಾ ಸಂಹಿತ 1973ರ ಕಲಂ 144 ರಡಿ ಕೊಡಗು ಜಿಲ್ಲೆಯ ಸಿದ್ದಾಪುರ ನಗರ, ವಾಲ್ನೂರು ಗ್ರಾಮ, ಅರೆಕಾಡು ಗ್ರಾಮ, ನೆಲ್ಲಿಹುದಿಕೇರಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಮುಂಜಾಗೃತ ಕ್ರಮವಾಗಿ ಇಂದು ಶುಕ್ರವಾರ ತಕ್ಷಣದಿಂದ ಜಾರಿಗೆ ಬರುವಂತೆ ರಾತ್ರಿ 10 ಗಂಟೆಯವರೆಗೆ ನಿಷೇಧಾಜ್ಞೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶ ಹೊರಡಿಸಿದ್ದಾರೆ.

ಈ ಅವಧಿಯಲ್ಲಿ 5 ಕ್ಕಿಂತ ಹೆಚ್ಚು ಜನ ಗುಂಪು ಸೇರತಕ್ಕದಲ್ಲ. ಪ್ರತಿಭಟನೆ, ಮೆರವಣಿಗೆ, ಜಾಥಾ, ರಸ್ತೆ ತಡೆ, ಪ್ರಚೋದಾನಾತ್ಮಕ ಹೇಳಿಕೆ, ಘೋಷಣೆ ಕೂಗದಂತೆ ನಿಷೇಧಾಜ್ಞೆ ಹೇರಲಾಗಿದೆ.

Latest Indian news

Popular Stories