ಮಹಿಳೆಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ

ಕೋಲಾರ, ಮಾರ್ಚ್​.05: ಮಹಿಳೆಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ (Murder) ಮಾಡಲಾಗಿದ್ದು ಅತ್ಯಾಚಾರ ಶಂಕೆ ವ್ಯಕ್ತವಾಗಿದೆ. ಕೋಲಾರ ಜಿಲ್ಲೆ ಕೆಜಿಎಫ್ (KGF) ತಾಲೂಕಿನ ನಾಗಶೆಟ್ಟಿಹಳ್ಳಿಯಲ್ಲಿ ಕೆಜಿಎಫ್ ತಾಲೂಕಿನ ಐಪಲ್ಲಿ ಗ್ರಾಮದ 28 ವರ್ಷದ ಮಹಿಳೆ ಕೊಲೆ ಮಾಡಲಾಗಿದೆ.

ಸ್ಥಳಕ್ಕೆ ಕೆಜಿಎಫ್ ಎಸ್​ಪಿ ಶಾಂತರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಕೆಜಿಎಫ್ ಆಸ್ಪತ್ರೆಗೆ ಶವ ಸ್ಥಳಾಂತರ ಮಾಡಲಾಗಿದೆ. ಆರೋಪಿ ಪತ್ತೆಗಾಗಿ ತಂಡ ರಚನೆ ಮಾಡಲಾಗಿದೆ. ಬೇತಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Latest Indian news

Popular Stories