ಕೋಲಾರ: ಕೆರೆಯಲ್ಲಿ ಕಾಲು ಜಾರಿ ಬಿದ್ದು ತಾಯಿ-ಮಗ ಮೃತ್ಯು

ಕೋಲಾರ :ಕೆರೆಯಲ್ಲಿ ಕಾರು ಜಾರಿ ಬಿದ್ದು ತಾಯಿ ಮಗ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯಲ್ಲಿ ಸಂಭವಿಸಿದೆ.

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಕೋಡಿಪಲ್ಲಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಮೃತ ಪಟ್ಟವರನ್ನು ತಾಯಿ ಗೀತಾ (26) ಮಗ ಯಶವಂತ್ (6) ಎನ್ನಲಾಗಿದೆ.

ಕೋಡಿಹಳ್ಳಿ ಗ್ರಾಮದ ಸಂಬಂಧಿಕರ ಮನೆಗೆ ಬಂದಿದ್ದ ವೇಳೆ ಈ ದುರ್ಘಟನೆ ನಡೆದಿದೆ ಎನ್ನಲಾಗಿದ್ದು,ಮೃತ ತಾಯಿ ಮಗನನ್ನು ಶ್ರೀನಿವಾಸಪುರ ಪಟ್ಟಣದ ಮಾರುತಿ ನಗರ ನಿವಾಸಿಗಳು ಎಂದು ಹೇಳಲಾಗುತ್ತಿದೆ. ಗೌನಿಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Latest Indian news

Popular Stories