ಅನರ್ಹಗೊಂಡ ‘BPL’ ಕಾರ್ಡ್ ‘APL’ ಗೆ ವರ್ಗಾವಣೆ :ಮುಂದಿನ ವಾರ ‘DBT’ಹಣ ಖಾತೆಗೆ ಜಮಾ:ಸಚಿವ ಮುನಿಯಪ್ಪ

ಕೋಲಾರ : ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಪ್ರತಿ ತಿಂಗಳು ಬಿಪಿಎಲ್ ಕಾರ್ಡ್ ಫಲಾನುಭವಿಗಳಿಗೆ ಡಿಬಿಟಿ ಮೂಲಕ ಹಣ ಜಮಾ ಆಗುತ್ತಿತ್ತು. ಇತ್ತೀಚಿಗೆ ಕೆಲವು ತಿಂಗಳಗಳವರೆಗೆ ಹಣ ಜಮೆ ಆಗಿರಲಿಲ್ಲ.ಸರ್ವರ್ ಸಮಸ್ಯೆಯಿಂದ ಈ ಒಂದು ಹಣ ಜಮೆ ಆಗಿಲ್ಲ. ಹಾಗಾಗಿ ಮುಂದಿನ ವಾರ ಎಲ್ಲಾ ಹಣ ಒಟ್ಟಿಗೆ ಜಮಾ ಆಗುತ್ತದೆ ಎಂದು ಆಹಾರ ಸಚಿವ ಕೆಎಚ್ ಮುನಿಯಪ್ಪ ಸ್ಪಷ್ಟಪಡಿಸಿದರು.

ಕೋಲಾರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರತಿ ತಿಂಗಳು 10ರಂದು ಹಣ ಬಿಡುಗಡೆಯಾಗುತ್ತಿತ್ತು. ಆದರೆ ಸರ್ವರ್ ಸಮಸ್ಯೆಯಿಂದ ಹಣ ಬಿಡುಗಡೆ ವಿಳಂಬವಾಗಿದೆ. ಬಾಕಿ ಹಣ ಮುಂದಿನ ವಾರ ಬಿಡುಗಡೆಯಾಗಲಿದೆ. ಅದೇ ರೀತಿ ಬಿಪಿಎಲ್​ ಅರ್ಹತೆ ಪರಿಶೀಲಿಸಿ ಅನರ್ಹರನ್ನ ಎಪಿಎಲ್​ಗೆ ವರ್ಗಾವಣೆ ಮಾಡಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.

ಬಿಪಿಎಲ್‌ ಕಾರ್ಡ್‌ದಾರ ಕುಟುಂಬಗಳ ಪ್ರತಿ ಸದಸ್ಯರಿಗೆ 5 ಕೆಜಿ ಅಕ್ಕಿ ಬದಲಾಗಿ ಸರ್ಕಾರ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡುತ್ತಿತ್ತು. ಪ್ರತಿ ಕೆಜಿ ಅಕ್ಕಿಗೆ ತಲಾ 34ರೂ.ನಂತೆ ಒಟ್ಟು 5 ಕೆಜಿ ಅಕ್ಕಿಗೆ 170ರೂ ನೀಡಲಾಗುತ್ತಿತ್ತು. ಅದರಂತೆ ಫಲಾನುಭವಿಗಳ ಖಾತೆಗೆ ಹಣ ಕೂಡ ಜಮಾವಣೆಯಾಗುತ್ತಿತ್ತು. ಹೀಗಾಗಿ ಫಲಾನುಭವಿಗಳು ಬ್ಯಾಂಕ್ ಗಳಿಗೆ ಬೇಟಿ ನೀಡಿ ಸುಸ್ತಾಗಿ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದರು.

Latest Indian news

Popular Stories