ಪಾದಯಾತ್ರಿಕರ ಮೇಲೆ ಹರಿದ ಲಾರಿ. ಓರ್ವ ಮೃತ್ಯು, ಇನ್ನೋರ್ವ ಗಂಭೀರ

ಕೋಪ್ಪಳ: ತಾಲೂಕಿನ ಹುಲಿಗೆಮ್ಮ ದೇವಿ ಜಾತ್ರೆ ಪ್ರಯುಕ್ತ ಪಾದಯಾತ್ರೆ ಹೊರಟಿದ್ದ ಯಾತ್ರಿಕನ ಮೇಲೆ ಶುಕ್ರವಾರ ಬೆಳಗ್ಗೆ ಲಾರಿಯೊಂದು ಹರಿದ ಪರಿಣಾಮ ಯಾತ್ರಿಕ ಸ್ಥಳದಲ್ಲೇ ಮೃತಪಟ್ಟು ಮತ್ತೋರ್ವ ವ್ಯಕ್ತಿ ಗಂಭೀರ ಗಾಯಗೊಂಡಿರುವ ಘಟನೆ ಕೊಪ್ಪಳ ತಾಲೂಕಿನ ಕೆರಹಳ್ಳಿ ಮೇಲ್ಸೇತುವೆ ಬಳಿ ನಡೆದಿದೆ.

ಬಾಗಲಕೋಟ ಜಿಲ್ಲೆಯ ಹುನಗುಂದ ತಾಲೂಕಿನ ರಕ್ಕಸಗಿ ಗ್ರಾಮದ ನಿವಾಸಿ ಯಮನೂರಪ್ಪ ಸಣ್ಣಮನಿ (34) ಮೃತ ವ್ಯಕ್ತಿ. ಗಾಯಾಳು ಮಹಾಂತೇಶ ಎನ್ನುವವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಹುಲಿಗೆಮ್ಮ ದೇವಿ ಜಾತ್ರೆ ಹಿನ್ನೆಲೆಯಲ್ಲಿ ಹುಲಿಗೆಮ್ಮ ದೇವಸ್ಥಾನಕ್ಕೆ ಗ್ರಾಮದಿಂದ ಹುಲಿಗೆಮ್ಮ ದೇವಸ್ಥಾನಕ್ಕೆ ಪಾದಯಾತ್ರೆ ಮೂಲಕ ಆಗಮಿಸುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಲಾರಿ ಭಕ್ತಾಧಿಗಳ ಮೇಲೆ ಹರಿದಿದೆ.

ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Latest Indian news

Popular Stories