ಕೊಪ್ಪಳ : ತಾಲೂಕಿನ ಇಂದರ್ಗಿ ಗ್ರಾಮದಲ್ಲಿ ಜಮೀನಿಗೆ ಹೋಗಿದ್ದ ವೇಳೆ ರೈತನ ಮೇಲೆ ಕರಡಿ ದಾಳಿ ನಡೆಸಿದ ಘಟನೆ ನಡೆದಿದೆ. ಘಟನೆಯಲ್ಲಿ ಶರಣಪ್ಪ ಹಿರೇಮನೆ ಎನ್ನುವ ರೈತನಿಗೆ ಗಂಭೀರ ಗಾಯಗಳಾಗಿವೆ.
ಈ ಭಾಗದಲ್ಲಿ ನಿರಂತರವಾಗಿ ಕರಡಿ ಹಾವಳಿ ಹೆಚ್ಚಿದ್ದು, ಕೂಡಲೇ ಇದರಿಂದ ರಕ್ಷಿಸುವಂತೆ ಸ್ಥಳೀಯರು ಆಗ್ರಹಿಸುತ್ತಿದ್ದಾರೆ.ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಅರೆ ಮಲ್ಲಾಪುರ ಚಳಿಗೇರಿ ರಸ್ತೆಯ ಪಕ್ಕದಲ್ಲಿ ಚಿರತೆ ಪ್ರತ್ಯಕ್ಷದಿಂದ ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ.ರಸ್ತೆ ಪಕ್ಕದಲ್ಲಿ ಚಿರತೆ ಓಡಾಡುತ್ತಿರುವುದು ಗಮನಿಸಿರುವುದು ಇದೀಗ ಬೆಳಕಿಗೆ ಬಂದಿದೆ.