ಮೋದಿ ಮೋದಿ ಎಂದು ಘೋಷಣೆ ಕೂಗುವ ಯುವಕರ ಕಪಾಳಕ್ಕೆ ಹೊಡೆಯಬೇಕು; ಸಚಿವ ಶಿವರಾಜ್ ತಂಗಡಗಿ ವಿವಾದಾತ್ಮಕ ಹೇಳಿಕೆ

ಕೊಪ್ಪಳ: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜಕೀಯ ನಾಯಕರು ಅಬ್ಬರದ ಪ್ರಚಾರದ ಬರದಲ್ಲಿ ಮಾತಿನ ಮೇಲಿನ ನಿಯಂತ್ರಣ ಕಳೆದುಕೊಳ್ಳುತ್ತಿದ್ದಾರೆ. ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ತೀವ್ರ ಚರ್ಚೆಗೆ ಗ್ರಾಸರಾಗಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟೀಕಾಪ್ರಹಾರ ಮಾಡುವ ಬರದಲ್ಲಿ ವಿವಾದ ಸೃಷ್ಟಿಸಿದ್ದಾರೆ. ಕೊಪ್ಪಳದ ಕಾರಟಗಿಯಲ್ಲಿ ಮಾತನಾಡಿದ ಸಚಿವ ಶಿವರಾಜ್ ತಂಗಡಗಿ, ಮೋದಿ ಮೋದಿ ಎಂದು ಘೋಷಣೆ ಕೂಗುವ ಯುವಕರು, ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಬೇಕು ಎಂದಿದ್ದಾರೆ.

ಮೋದಿ ಸರ್ಕಾರ ಪ್ರತಿವರ್ಷ 2 ಕೋಟಿ ಉದ್ಯೋಗ ಸೃಷ್ಟಿ ಮಾಡುವುದಾಗಿ ಹೇಳಿತ್ತು. ಆದರೆ ಈಗ ಉದ್ಯೋಗ ಕೇಳಿದರೆ ಪಕೋಡ ಮಾರಿ ಎನ್ನುತ್ತಿದ್ದಾರೆ ಮೋದಿ. ಹತ್ತು ವರ್ಷಗಳಲ್ಲಿ 20 ಕೋಟಿ ಯುವಕರಿಗೆ ಉದ್ಯೋಗ ಸಿಗಬೇಕಿತ್ತು. ಆದರೆ ಮೋದಿ ಸರ್ಕಾರ ಭರವಸೆ ಈಡೇರಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ಮೋದಿ ನೀಡಿದ ಭರವಸೆಯಂತೆ ಈವರೆಗೂ ಉದ್ಯೋಗ ಸೃಷ್ಟಿ ಮಾಡದ ಕಾರಣ ಇನ್ನು’ವಿದ್ಯಾರ್ಥಿಗಳು, ಯುವಕರು ಮೋದಿ ಮೋದಿ ಘೋಷಣೆ ಕೂಗಿದರೆ ಅವರ ಕಪಾಳಕ್ಕೆ ಹೊಡೆಯಬೇಕು’ ಎಂದು ಹೇಳಿದ್ದಾರೆ.

Latest Indian news

Popular Stories