ಮೃತ PSI ಪರಶುರಾಮ ಕುಟುಂಬಕ್ಕೆ 50 ಲಕ್ಷ ರೂ.ಪರಿಹಾರ ಘೋಷಣೆ

ಆಗಸ್ಟ್ 07: ಪಿಎಸ್‌ಐ ಪರಶುರಾಮ ಅವರ ಆತಹತ್ಯೆ ಯಾದಗಿರಿಯಲ್ಲಿ ನಿಗೂಡವಾಗಿ ಮೃತಪಟ್ಟಿದ್ದರು. ಈ ಪ್ರಕರಣ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ಇದರ ಬೆನ್ನಲ್ಲೆ ಮೃತರ ನಿವಾಸಕ್ಕೆ ಬುಧವಾರ ಗೃಹ ಸಚಿವ ಡಾ.‌ಜಿ.ಪರಮೇಶ್ವರ ಅವರು ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು.

ಅಲ್ಲದೇ ಈ ಸಾವಿಗೆ ಸೂಕ್ತ ನ್ಯಾಯ ಕೊಡಿಸುವುದಾಗಿ ಅವರು ಕುಟುಂಬಸ್ಥರಿಗೆ ಭರವಸೆ ನೀಡಿದರು.

ಜಿಲ್ಲೆಯ ಕಾರಟಗಿಯ ಸೋಮನಾಳ ಗ್ರಾಮದಲ್ಲಿರುವ ನಿವಾಸದಲ್ಲಿ ಒಂದು ತಾಸಿಗು ಹೆಚ್ಚು ಕಾಲ ಸಚಿವರು ಪರಶುರಾಮ ಅವರ ಕುಟುಂಬದವರೊಂದಿಗೆ ಚರ್ಚಿಸಿದರು. ಪರಶುರಾಮ್ ಪತ್ನಿಗೆ ಸೂಕ್ತವಾದ ಕೆಲಸ ನೀಡಲಾಗುವುದು ಎಂದು ಭೇಟಿ ವೇಳೆ ಸುದ್ದಿಗಾರರ ಹಲವು ಪ್ರಶ್ನೆಗಳಿಗೆ ಉತ್ತರಿಸಿದರು.

ಪ್ರಾಮಾಣಿಕ ಪೊಲೀಸ್ ಅಧಿಕಾರಿ ಮೃತಪಟ್ಟಿದ್ದಾರೆ‌. ಈ ಸಂಬಂಧ ತನಿಖೆ ನಡೆಯುತ್ತಿದ್ದು, ಮರಣೋತ್ತರ ಪರೀಕ್ಷೆಯ ವರದಿಗೆ ನಿರೀಕ್ಷೆ ಮಾಡಲಾಗುತ್ತಿದೆ. ಎಫ್‌ಎಸ್‌ಎಲ್‌ನವರು ಪರಿಶೀಲನೆ ನಡೆಸಿ, ಸ್ಯಾಂಪಲ್ಸ್ ಸಂಗ್ರಹಿಸಿದ್ದಾರೆ‌. ಇಲಾಖೆಯ ಪ್ರಾಮಾಣಿಕ ಅಧಿಕಾರಿಯನ್ನು ಕಳೆದುಕೊಂಡಿದ್ದಕ್ಕೆ ನೋವಾಗುತ್ತಿದೆ ಎಂದು ಸಚಿವರು ವಿಷಾದ ವ್ಯಕ್ತಪಡಿಸಿದರು.

ಪಿಎಸ್‌ಐ ಪರಶುರಾಮ ಅವರ ಕುಟುಂಬಕ್ಕೆ ಸಾಂತ್ವಾನ ಹೇಳುವುದು ನಮ್ಮ ಧರ್ಮ, ಕರ್ತವ್ಯವಾಗಿದ್ದು, ಪರಶುರಾಮ ತನ್ನ ಕುಟುಂಬದವರಿಗೆ ಎಲ್ಲವೂ ಆಗಿದ್ದ. ಎಲ್ಲ ಜವಾಬ್ದಾರಿಗಳನ್ನು ಹೊತ್ತು ನೋಡಿಕೊಳ್ಳುತ್ತಿದ್ದ ಎಂಬುದನ್ನು ಆತನ ಸಹೋದರ ಹನುಮಂತ ಅವರಿಂದ ತಿಳಿದುಕೊಂಡಿದ್ದೇನೆ.

Latest Indian news

Popular Stories