ಮಡಿಕೇರಿ : ಸಂಜೀವಿನಿ ಕೆಎಸ್‌ಆರ್‌ಎಲ್ಪಿಎಸ್ ಸಂಸ್ಥೆಯ ವತಿಯಿಂದ ಅನುಷ್ಠಾನಗೊಳ್ಳುತ್ತಿರುವ ಎನ್‌ಆರ್‌ಎಲ್‌ಎಂ ಯೋಜನೆಯಡಿ ಗ್ರಾಮೀಣ ಮಹಿಳೆಯರ ಸಾಮಾಜಿಕ ಮತ್ತು ಆರ್ಥಿಕ ಬಲವರ್ಧನೆಗಾಗಿ ಸಂಜೀವಿನಿ ಸ್ವ ಸಹಾಯ ಸಂಘಗಳ ಮಹಿಳಾ ಉದ್ಯಮಿಗಳು ತಯಾರಿಸುವ ಉತ್ಪನ್ನಗಳನ್ನು ಮಾರಾಟ ಮಾಡುವ ಸಲುವಾಗಿ ಕೊಡಗು ಜಿಲ್ಲಾ ಪಂಚಾಯಿತಿ ವತಿಯಿಂದ ‘ಜಿಲ್ಲಾ ಮಟ್ಟದ ವ್ಯಾಪಾರ ಮೇಳವು’ ಫೆಬ್ರವರಿ, 07 ಮತ್ತು 08 ರಂದು ನಗರದ ಗಾಂಧಿ ಮೈದಾನದಲ್ಲಿ ನಡೆಯಲಿದೆ.
ಫೆಬ್ರವರಿ, 07 ರಂದು ಬೆಳಗ್ಗೆ 11 ಗಂಟೆಗೆ ನಗರದ ಗಾಂಧಿ ಮೈದಾನದಲ್ಲಿ ಜಿಲ್ಲಾ ಮಟ್ಟದ ವ್ಯಾಪಾರ ಮೇಳದ ಉದ್ಘಾಟನಾ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ. ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಇತರರು ಪಾಲ್ಗೊಳ್ಳಲಿದ್ದಾರೆ. ವ್ಯಾಪಾರ ಮೇಳದಲ್ಲಿ ಸಂಜೀವಿನಿ ಸ್ವ ಸಹಾಯ ಸಂಘಗಳ ಮಹಿಳಾ ಉದ್ಯಮಿಗಳು ತಯಾರಿಸುವ ಉತ್ಪನ್ನಗಳನ್ನು ಮಾರಾಟಕ್ಕೆ ಉತ್ತೇಜನ ನೀಡುವ ಸಲುವಾಗಿ ಕಾರ್ಯಕ್ರಮ ಆಯೋಜಿಸಲಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಜಿ.ಪಂ.ಸಿಇಒ ಡಾ.ಎಸ್.ಆಕಾಶ್ ಅವರು ಕೋರಿದ್ದಾರೆ.