ಇಂದು ಪ್ರಕೃತಿಯ ನಾಶವು ಮಾನವನಿಂದಲೇ ನಡೆಯುತ್ತಿದೆ. ಹೊರತು ಇದಕ್ಕೆ ದೇವನು ಜವಾಬ್ದಾರಿಯಲ್ಲ. ಇಂದು ವಿಜ್ಞಾನ ಬಹಳಷ್ಟು ಮುಂದುವರಿದರು.ಸಾಧಿಸಲು ಹಾಗೂ ಎಲ್ಲವನ್ನೂ ಕಂಡು ಹಿಡಿಯಲು ಸಾದ್ಯವಿಲ್ಲ.ಜನರು ಪರಸ್ಪರ ವಿಶ್ವಾಸ ಸಹಕಾರ ಹಾಗೂ ಸಾಮರಸ್ಯದಿಂದ ಜೀವಿಸಿದರೆ ಪರಿಸರವೂ ಉತ್ತಮವಾಗಿರುತ್ತದೆ..ಎಂದು ಎ.ಎಲ್ ಜಿ ಕ್ರೆಸಂಟ್ ಶಾಲಾ ಕಾರ್ಯದರ್ಶಿ ಜಿ.ಹೆಚ್ ಮೊಹಮ್ಮದ್ ಹನೀಪ್ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು..
ಕೊಡಗು ಎಂದರೆ ಅದು ಪ್ರಕೃತಿ, ಪರಿಸರ ಇವೆಲ್ಲವೂ ಪರಸ್ಪರ ಹೊಂದಿಕೊಂಡು ಸಾಗ ಬೇಕು..ಕೊಡಗಿನಲ್ಲಿ ಮಾನವ ಮತ್ತು ವನ್ಯಜೀವಿಗಳ ನಡುವೆ ಸಂಘರ್ಷ. ಇತ್ತೀಚಿಗೆ ಹೆಚ್ಚಾಗುತ್ತಿದೆ..ಇದಕ್ಕೆ ಶಾಶ್ವತ ಪರಿಹಾರವಾಗಿ ವೈಜ್ಞಾನಿಕವಾಗಿ ಒಂದು ಸೈರನ್ ಕಂಡು ಹಿಡಿಯಲು ಪ್ರಯತ್ನಿಸಬೇಕು..ಎಂದು ಮುಖ್ಯ ಅತಿಥಿಯಾಗಿ ಆಗಮಿಸಿದ ಉಪ.ಅರಣ್ಯ ಸಂರಕ್ಷಣಾಧಿಕಾರಿಗಳು ಮಡಿಕೇರಿ ಅರಣ್ಯ ವಿಭಾಗ ಇವರು ಹೇಳಿದರು..
ಕೊಡಗು ಜಿಲ್ಲಾ ಮಟ್ಟದ ಮಕ್ಕಳ
ವಿಜ್ಞಾನ ಸಮಾಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಂವಹನ ಮಂಡಳಿ(ಎನ್ಸಿಎಸ್ಟಿಸಿ), ರಾಜ್ಯ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಪೆÇ್ರೀತ್ಸಾಹಕ ಸೊಸೈಟಿ(ಕೆ-ಸ್ಟೆಪ್ಸ್), ಜಿಲ್ಲಾಡಳಿತ, ಕೊಡಗು ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಮಿತಿ ಹಾಗೂ ಮಡಿಕೇರಿ ನಗರದ ಎ.ಎಲ್.ಜಿ.ಕ್ರೆಸೆಂಟ್ ಶಾಲೆಯ ಸಂಯುಕ್ತ ಆಶ್ರಯದಲ್ಲಿ “ಯೋಗಕ್ಷೇಮಕ್ಕಾಗಿ ಜೀವಿ ಪರಿಸರ ವ್ಯವಸ್ಥೆಯನ್ನು ಅರ್ಥ ಮಾಡಿಕೊಳ್ಳೋಣ” ಎಂಬ ಕೇಂದ್ರ ವಿಷಯದಡಿ ಕೊಡಗು ಜಿಲ್ಲಾ ಮಟ್ಟದ 30 ನೇ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶವು ಜನವರಿ, 3 ರಂದು ಬೆಳಗ್ಗೆ 10 ಗಂಟೆಗೆ ನಗರದ ಎಎಲ್ಜಿ ಕ್ರೆಸೆಂಟ್ ಶಾಲೆಯಲ್ಲಿ ನಡೆಯಿತು.ಜಿಲ್ಲಾಧಿಕಾರಿ ಡಾ ಬಿ.ಸಿ.ಸತೀಶ ಸಮ್ಮೇಳನ ಉದ್ಘಾಟಿಸಿದರು.
ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿ ಅಧ್ಯಕ್ಷ ಟಿ.ಜಿ.ಪ್ರೇಮಕುಮಾರ್ ಸಮಾವೇಶದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡುತ್ತಾ….
ಮೂಲಭೂತ ಸೌಕರ್ಯಗಳ ಸೌಕರ್ಯ ಹಾಗೂ ಕೊರತೆಗಳ ಬಗ್ಗೆ .ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲು ವೈಜ್ಞಾನಿಕ ಸಂಸೋದನೆಗಳು ಬಹಳ ಪರಿಣಾಮಕಾರಿ .ಮುಂದಿನ ಪೀಳಗೆಗೆ ಪರಿಸರ ಸಂರಕ್ಷಣೆ ಹಾಗೂ ಸಾಮಾಜಿಕ ಕಳಕಳಿಯನ್ನು ಬೆಳಸಲು ಸಹಾಯಕವಾಗುತ್ತದೆ..ಒಂದು ರೀತಿಯಲ್ಲಿ ಹೊಸ ಶಿಕ್ಷಣ ನೀತಿಗೆ ಪೂರಕವಾಗಿದೆ…ಎಂದು ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿ ಮತ್ತು ಜಿಲ್ಲಾ ನೊಡೆಲ್ ಅಧಿಕಾರಿ ಶ್ರೀ ಜಿ.ಟಿ ಪ್ರೇಮ್ ಕುಮಾರ್ ಅಭಿಪ್ರಾಯ ಪಟ್ಟರು..
ಡಿಡಿಪಿಐ ಸಿ.ರಂಗಧಾಮಯ್ಯ, ರೋಟರಿ ಕ್ಲಬ್ನ ಪಬ್ಲಿಕ್ ಇಮೇಜ್ ಸಮಿತ ಸಂಯೋಜಕ ಜಿ.ಶ್ರೀಹರ್ಷ
ಮಧ್ಯಾಹ್ನ 3 ಗಂಟೆಗೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಜಿ.ಪಂ.ಸಿಇಒ ಡಾ.ಎಸ್.ಆಕಾಶ್ ಕಿರಿಯ ವಿಜ್ಞಾನಿಗಳಿಗೆ ಪ್ರಶಸ್ತಿ ಪತ್ರ ವಿತರಿಸಲಿದ್ದಾರೆ. ಉಪ ವಿಭಾಗಾಧಿಕಾರಿ ಡಾ.ಯತೀಶ್ ಉಳ್ಳಾಲ್, ಕೂಡಿಗೆ ಡಯಟ್ ಪ್ರಾಂಶುಪಾಲ ಬಿ.ವಿ.ಮಲ್ಲೇಶಪ್ಪ, ಜಿಲ್ಲಾ ಕ.ಸಾ.ಪ.ಅಧ್ಯಕ್ಷ ಎಂ.ಪಿ.ಕೇಶವಕಾಮತ್ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
“ಯೋಗಕ್ಷೇಮಕ್ಕಾಗಿ ಜೀವಿ ಪರಿಸರ ವ್ಯವಸ್ಥೆಯನ್ನು ಅರ್ಥ ಮಾಡಿಕೊಳ್ಳೋಣ” ಕೇಂದ್ರ ವಿಷಯದಡಿ ವಿವಿಧ 5 ಉಪ ವಿಷಯಗಳ ಕುರಿತು ವಿದ್ಯಾರ್ಥಿಗಳು ಮಾರ್ಗದರ್ಶಿ ಶಿಕ್ಷಕರ ಮಾರ್ಗದರ್ಶನದಡಿ ತಮ್ಮ ಸುತ್ತಲಿನ ಪರಿಸರದ ಸಮಸ್ಯೆಯನ್ನು ಗುರುತಿಸಿ ಸರ್ವೆ ಕಾರ್ಯ ನಡೆಸಿ ತಜ್ಞರ ಅಭಿಪ್ರಾಯ ಪಡೆದು ವಿಶ್ಲೇಷಿಸಿ, ಸಂಶೋಧಿಸಿ ಸೂಕ್ತ ಪರಿಹಾರ ಕಂಡುಕೊಂಡು ಒಂದು ಉತ್ತಮ ವೈಜ್ಞಾನಿಕ ಯೋಜನಾ ಪ್ರಬಂಧ ಮಂಡಿಸುವ ಮೂಲಕ ಮಕ್ಕಳು ವಿಜ್ಞಾನ ಸಮಾವೇಶದಲ್ಲಿ ಭಾಗವಹಿ ಎಂದು ವಿಜ್ಞಾನ ಕಾರ್ಯಕ್ರಮದ ನೋಡಲ್ ಅಧಿಕಾರಿ ಟಿ.ಜಿ.ಪ್ರೇಮಕುಮಾರ್ ತಿಳಿಸಿದ್ದಾರೆ.
ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶವು ಭವಿಷ್ಯದ ವಿಜ್ಞಾನಿಗಳನ್ನಾಗಿ ರೂಪಿಸಲು ಸಹಕಾರಿಯಾಗಿದೆ ಎಂದು ತಿಳಿಸಿದ್ದಾರೆ.