ಮಡಿಕೇರಿ : ಮಡಿಕೇರಿಯಲ್ಲಿ ಘೋರ ಘಟನೆ ನಡೆದಿದ್ದು, ಬಂದೂಕಿನಿಂದ ಗುಂಡು ಹಾರಿಸಿ ತಂದೆಯೇ ತನ್ನ ಮಗನನ್ನು ಕೊಲೆ ಮಾಡಿದ್ದಾರೆ.
ಕೊಡಗು ಜಿಲ್ಲೆಯ ಮಡಿಕೇರಿಯ ಕಟ್ಟೆಮಾಡು ಗ್ರಾಮದಲ್ಲಿ ಈ ಘಟನೆ ವರದಿಯಾಗಿದೆ.
ಕೌಟುಂಬಿಕ ಕಲಹದ ಹಿನ್ನೆಲೆ ತಂದೆ ನಂದೇಟಿರ ಚಿಟ್ಟಿ ಎಂಬುವವರು ಪುತ್ರ ನಂದೇಟಿರ ನಿರೇನ್(28) ಗೆ ಬಂದೂಕಿನಿಂದ ಗುಂಡು ಹಾರಿಸಿ ಹತ್ಯೆಗೈದಿದ್ದಾರೆ.
ಮಗನನ್ನು ಕೊಲೆ ಮಾಡಿದ ಬಳಿಕ ತಂದೆ ಪೊಲೀಸ್ ಠಾಣೆಗೆ ತೆರಳಿ ತಾವೇ ಶರಣಾಗಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಡು ಆರೋಪಿಯನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.