ನಾಪೋಕ್ಲು ಪಟ್ಟಣದಲ್ಲ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಎಚ್.ಕೆ ಸಂದೀಪ್ (40)ಆತ್ಮಹತ್ಯೆಗೈದ ದುರ್ದೈವಿ.ಸಕಲೇಶಪುರ ತಾಲೂಕಿನ ಹೆತ್ತೂರು ಹೋಬಳಿ ಹಡ್ಲಹಳ್ಳಿ ಗ್ರಾಮದ ನಿವಾಸಿಯಾಗಿದ್ದು ನಾಪೋಕ್ಲು ಪಟ್ಟಣದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದರು.
ಕಳೆದ 20 ವರ್ಷಗಳಿಂದ ನಾಪೋಕ್ಲುವಿನಲ್ಲಿ ಆರ್.ಎಚ್. ಬಟ್ಟೆಮಳಿಗೆ ನಡೆಸುತ್ತಿದ್ದ ಸಂದೀಪ್ ವ್ಯಾಪಾರದಲ್ಲಿ ನಷ್ಟದಿಂದಾಗಿ ಆತ್ಮಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ.
ವ್ಯಾಪಾರ ಸ್ಥಗಿತಗೊಳಿಸಿ, ಬದುಕು ಸಾಗಿಸಲು ಕಷ್ಟಪಡುತ್ತಿದ್ದ ಅವರು ಸೋಮವಾರ ಬೆಳಗ್ಗೆ 7.30ಕ್ಕೆ ಸ್ನೇಹಿತ ಸಂದೇಶ್ ಎಂಬುವರಿಗೆ ಕರೆ ಮಾಡಿ 9 ಗಂಟೆಗೆ ಮನೆಗೆ ಬರಲು ತಿಳಿಸಿದ್ದರು.
ಬೆಳಗ್ಗೆ 9 ಗಂಟೆಗೆ ಸಂದೇಶ್ ಮನೆಗೆ ತೆರಳಿದ್ದಾಗ ಸಂದೀಪ್ ಆತ್ಮಹತ್ಯೆಗೈದಿರುವುದು ಪತ್ತೆಯಾಗಿದೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.