ಮಡಿಕೇರಿ: ಹುಲಿ ದಾಳಿಗೆ ಕಾಡುಕೋಣ ಬಲಿ

ಹುಲಿ ದಾಳಿಗೆ ಕಾಡು ಕೋಣವೊಂದು ಬಲಿಯಾಗಿರುವ ಘಟನೆ ಪಾಲಿಬೆಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಒಳಪಡುವ ಗೌರಿಬೆಟ್ಟ ಎಸ್ಟೇಟ್ ನಲ್ಲಿ ನಡೆದಿದೆ.

ಇಂದು ಬೆಳಗ್ಗೆ ಕಾರ್ಮಿಕರು ಕೆಲಸಕ್ಕೆಂದು ತೋಟಕ್ಕೆ ತೆರಳಿದ ಸಂದರ್ಭ ಪ್ರಕರಣ ಬೆಳಕಿಗೆ ಬಂದಿದ್ದು ನೆನ್ನೆ ತಡ ರಾತ್ರಿ ಕಾಡು ಕೋಣದ ಮೇಲೆ ಹುಲಿ ದಾಳಿ ನಡೆಸಿರಬಹುದು ಎಂದು ಅಂದಾಜಿಸಲಾಗಿದೆ.

ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಳೆದ ಹಲವಾರು ದಿನಗಳಿಂದ ಈ ಭಾಗದಲ್ಲಿ ಹುಲಿಯೊಂದು ಓಡಾಟ ನಡೆಸುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಗ್ರಾಮಸ್ಥರು ಹುಲಿ ಸೆರೆಗೆ ಕ್ರಮಕೈಗೊಳ್ಳುವಂತೆ ಅರಣ್ಯ ಇಲಾಖೆಗೆ ಒತ್ತಾಯಿಸಿದ್ದಾರೆ.

Latest Indian news

Popular Stories