ಮಾ.10 ರಂದು ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ನೂತನ ಕಚೇರಿ ಕಟ್ಟಡ ಉದ್ಘಾಟನೆ


ಸುಂಟಿಕೊಪ್ಪ ಗ್ರಾಮ ಪಂಚಾಯಿತಿಯ ನೂತನ ಕಚೇರಿ ಕಟ್ಟಡ ಮತ್ತು ರಾಜೀವ್ ಗಾಂಧಿ ಸೇವಾ ಕೇಂದ್ರದ ಉದ್ಘಾಟನಾ ಸಮಾರಂಭವು ತಾ.10 ರ ಶುಕ್ರವಾರ ಬೆಳಗ್ಗೆ 10 ಗಂಟೆಗೆ ಮಾರುಕಟ್ಟೆ ಆವರಣದಲ್ಲಿ ನಡೆಯಲಿದೆ.


ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ಅವರು ನೂತನ ಕಚೇರಿ ಕಟ್ಟಡ ಮತ್ತು ರಾಜೀವ್ ಗಾಂಧಿ ಸೇವಾ ಕೇಂದ್ರದ ಉದ್ಘಾಟನೆ ನೆರವೇರಿಸುವರು. ಸಮಾರಂಭದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶಿವಮ್ಮ ಮಹೇಶ್ ಅವರು ವಹಿಸುವರು.


ಮುಖ್ಯ ಅತಿಥಿಗಳಾಗಿ ಪ್ರಾಥಮಿಕ, ಪ್ರೌಢ ಶಿಕ್ಷಣ, ಸಾಕಾಲ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ್, ಸಂಸದ್ ಸದಸ್ಯರಾದ ಪ್ರತಾಪ್‌ ಸಿಂಹ, ವಿಧಾನ ಪರಿಷತ್ ಸದಸ್ಯರಾದ ಎಂ. ಪಿ. ಸುಜಾ ಕುಶಾಲಪ್ಪ, ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷರಾದ ನಾಪಂಡ ರವಿ ಕಾಳಪ್ಪ, ಗ್ರಾಮ ಪಂಚಾಯತಿ ಉಪಾಧ್ಯಕ್ಷರಾದ ಕೆ. ಕೆ. ಪ್ರಸಾದ್ ಕುಟ್ಟಪ್ಪ, ಜಿಲ್ಲಾ ಪಂಚಾಯಿತಿ ಆಡಳಿತಾಧಿಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಅನ್ಬುಕುಮಾರ್, ಜಿಲ್ಲಾಧಿಕಾರಿಗಳಾದ ಡಾ: ಬಿ.ಸಿ.ಸತೀಶ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ಡಾ : ಎಸ್. ಆಕಾಶ್, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿಗಳಾದ ಬಿ.ವಿ. ಜಯಣ್ಣ, ಮತ್ತು ವಿಶೇಷ ಆಹ್ವಾನಿತರಾಗಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಕೆ.ಪಿ. ಚಂದ್ರಕಲಾ, ತಾಲ್ಲೂಕು ಪಂಚಾಯಿತಿ ಮಾಜಿ‌ ಸದಸ್ಯರಾದ ಓಡಿಯಪ್ಪನ ವಿಮಲಾವತಿರವರು ಉಪಸ್ಥಿತರಿರುವರು ಎಂದು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾದ ಬಿ. ಹೆಚ್. ವೇಣುಗೋಪಾಲ್ ಅವರು ತಿಳಿಸಿದ್ದಾರೆ.

Latest Indian news

Popular Stories